Mysore
28
broken clouds

Social Media

ಭಾನುವಾರ, 25 ಜನವರಿ 2026
Light
Dark

ಚಾಮುಂಡೇಶ್ವರಿ ತಾಯಿಯಿಂದಾನೇ ಕಾಂಗ್ರೆಸ್ ಅವನತಿ ಪ್ರಾರಂಭ: ವಿಪಕ್ಷ ನಾಯಕ ಆರ್.‌ಅಶೋಕ್‌

r ashok (1)

ಮೈಸೂರು: ಚಾಮುಂಡಿಬೆಟ್ಟದ ಬಗ್ಗೆ ಪದೇ ಪದೇ ಮಾತನಾಡಿದ್ರೆ ಚಾಮುಂಡೇಶ್ವರಿ ಚಲೋ ಕೂಡ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಬುದ್ದಿ ಕೊಡಲಿ. ಹಿಂದೂ ಶ್ರದ್ಧಾಕೇಂದ್ರ ಟಾರ್ಗೆಟ್ ಮಾಡುವ ಮನಸ್ಥಿತಿ ತೆಗೆದು ಹಾಕಲಿ. ಹಿಂದೂಗಳ ಭಾವನಗೆ ಧಕ್ಕೆ ತರದಂತೆ ಬುದ್ದಿ ಕೊಡಲಿ ಎಂದು ದೇವಿಯ ಬಳಿ ಬೇಡಿದ್ದೇನೆ. ಚಾಮುಂಡೇಶ್ವರಿ ದೇವಾಲಯ ಹಿಂದೂಗಳು ದೇವಾಲಯ ಅಲ್ಲ ಎಂದಿದ್ದಾರೆ‌. ಹಿಂದೂಗಳದ್ದಲ್ಲ ಎಂದರೆ ಮತ್ಯಾರದ್ದು? ಎಂದು ಪ್ರಶ್ನೆ ಮಾಡಿದರು. ನಿಮಗೆ ಧೈರ್ಯ ಇದ್ರೆ ಮಸೀದಿ ಮುಂದೆ ನಿಂತು ಇದು ಮುಸ್ಲಿಮರದ್ದಲ್ಲ ಎಂದು ಹೇಳ್ತೀರಾ? ಪದೇ ಪದೇ ಹಿಂದೂ ದೇವಾಲಯಗಳ ಟಾರ್ಗೆಟ್ ಯಾಕೆ? ಚುನಾವಣೆ ಬಂದಾಗ ಓಟ್ ಪಾಲಿಟಿಕ್ಸ್ ಮಾಡಿ. ಚುನಾವಣೆ ವೇಳೆ ಮುಸಲ್ಮಾನರ ಮೂಗಿಗೆ ತುಪ್ಪ ಸುರಿಯಿರಿ. ಆದರೆ ಈಗ ಯಾಕೆ ಓಟಿನ ಓಲೈಕೆ ರಾಜಕಾರಣ? ಎಂದು ಪ್ರಶ್ನೆ ಮಾಡಿದರು.

ಇನ್ನು ನಾಳೆ ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಎಲ್ಲಾ ಹಿಂದೂಗಳು ಬರಬೇಕು. ಚಾಮುಂಡಿ ಬೆಟ್ಟದ ಬಗ್ಗೆ ಪದೇ ಪದೇ ಮಾತನಾಡಿದ್ರೆ ಚಾಮುಂಡೇಶ್ವರಿ ಚಲೋ ಕೂಡ ಮಾಡ್ತೀವಿ‌.
ಟೂಲ್‌ಕಿಟ್ ಆಗಿ ಚಾಮುಂಡೇಶ್ವರಿ ದೇವಾಲಯ ಬಳಸಿದ್ರೆ ಹಿಂದೂಗಳು ಸಹಿಸಲ್ಲ. ಚಾಮುಂಡೇಶ್ವರಿ ತಾಯಿಯಿಂದಾನೇ ಕಾಂಗ್ರೆಸ್ ಅವನತಿ ಪ್ರಾರಂಭವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇನ್ನು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುಸ್ತಾಕ್ ಇಲ್ಲ, ಯಾವಕ್ಕಾನೋ ಗೊತ್ತಿಲ್ಲ. ದಸರಾ ಸಾವಿರಾರು ವರ್ಷಗಳ ಸಂಪ್ರದಾಯ. ಇಲ್ಲಿ ಬರುವವರು ಚಾಮುಂಡೇಶ್ವರಿ ತಾಯಿಯನ್ನು ಪೂಜಿಸುತ್ತಾರೆ. ಮೊದಲು ತಾಯಿಗೆ ಭಕ್ತಿ ಇದೆ ಎಂದು ಒಪ್ಪಿಕೊಳ್ಳಬೇಕು. ಕನ್ನಡವನ್ನ ಭುವನೇಶ್ವರಿ ಮಾಡಿದ್ದೀರಾ ಎಂದು ಬಾನು ಮಷ್ತಾಕ್ ಹೇಳಿದ್ದು. ಅರಿಶಿನ ಕುಂಕುಮ ಬಣ್ಣದ ಧ್ವಜ ಮಾಡಿದ್ದೀರಾ. ನಾವು ಭುವನೇಶ್ವರಿ ಒಪ್ಪಿಕೊಳ್ಳಲ್ಲ‌ ಎಂದಿದ್ರು. ಭುವನೇಶ್ವರಿ ಒಪ್ಪದಿದ್ದ ಮೇಲೆ ಚಾಮುಂಡೇಶ್ವರಿಯನ್ನು ಹೇಗೆ ಒಪ್ಪುತ್ತೀರ? ಬಾನು ಮುಷ್ತಾಕ್ ಕನ್ನಡ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ಕೂಡಲೇ ಬಾನು‌ ಮುಷ್ತಾಕ್ ಕನ್ನಡಿಗರ ಕ್ಷಮೆ ಕೇಳಬೇಕು. ಆನಂತರ ದಸರಾ ಉದ್ಘಾಟನೆ ಬಗ್ಗೆ ನೋಡುವ.
6 ಕೋಟಿ ಹಿಂದೂಗಳಲ್ಲಿ ಒಬ್ಬ ಸಾಧಕ ಸಿಗೋದಿಲ್ವಾ? ಕನ್ನಡದ ಬಗ್ಗೆ ಅಗೌರವ ತೋರಿದವರನ್ನೇ ಕರೆಯಬೇಕಿತ್ತಾ? ನಿಸಾರ್ ಅಹಮದ್ ಧರ್ಮದ ವಿರೋಧಿಯಲ್ಲ, ಎಲ್ಲರನ್ನು ಗೌರವಿಸುತ್ತಾರೆ. ತಾಯಿಗೆ ನಿತ್ಯೋತ್ಸವ ಎಂದು ಬರೆದಿದ್ದಾರೆ. ಧ್ವಜದ ಬಗ್ಗೆ ಆಡಿರುವ ಮಾತಿನ ಬಗ್ಗೆ ಮುಷ್ತಾಕ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಇನ್ನು ಧರ್ಮಸ್ಥಳ ಬಳಿಕ ದಸರಾ ಉದ್ಘಾಟನೆ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಒಂದು ಕೋಮುವನ್ನ ಸಂತೃಪ್ತಿ ಮಾಡುವ ಪ್ರಯತ್ನ ನಡೆಯುತ್ತಿದೆ.
ಅಯ್ಯಪ್ಪ, ತಿರುಪತಿ ಈಗ ಧರ್ಮಸ್ಥಳ ನೆಕ್ಸ್ಟ್ ಚಾಮುಂಡೇಶ್ವರಿ ದೇವಾಲಯ.. ಇದು ಕಾಂಗ್ರೆಸ್ ಸರ್ಕಾರದ ಟೂಲ್‌ಕಿಟ್‌ ಎಂದು ವಾಗ್ದಾಳಿ ನಡೆಸಿದರು.

ಇನ್ನು ನಾಗಮಂಗಲದಲ್ಲಿ ಮಸೀದಿ ಮುಂದೆ ಗಣೇಶ ಮೆರವಣಿಗೆಗೆ ಅವಕಾಶ ಇಲ್ಲ ಎಂದು ಹೇಳಿದ್ದವರ ಮೇಲೆ FIR ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಳೆದ ವರ್ಷ ಗಣೇಶನನ್ನೇ ಪೊಲೀಸ್ ಠಾಣೆಯಲ್ಲಿ ಇಟ್ಟಂತವರು. ಈ ವರ್ಷ ಗಣೇಶೋತ್ಸವ ಮೆರವಣಿಗೆ ಅನುಮತಿ ಕೊಡುತ್ತಿಲ್ಲ. ಮಸೀದಿ ಮುಂದೆ ರಸ್ತೆ ಮಾಡಿರುವುದು ಸರ್ಕಾರ. ಉದ್ದೇಶಪೂರ್ವಕವಾಗಿ ಅನುಮತಿ ನಿರಾಕರಿಸುತ್ತಿದ್ದಾರೆ. ಮಾತನಾಡಿದ್ರು ಎಂಬ ಕಾರಣಕ್ಕಾಗಿ ಇಬ್ಬರ ಮೇಲೆ FIR ಆಗಿದೆ. ಇನ್ನೊಂದು ಗಲಭೆಗೆ ಸರ್ಕಾರವೇ ದಾರಿ ಮಾಡ್ತಿದೆ.
ಹೀಗೆ ಮುಂದುವರೆದರೆ ದೇವರೆ ಶಿಕ್ಷೆ ಕೊಡುತ್ತಾರೆ ಎಂದು ಎಚ್ಚರಿಕೆ ನೀಡಿದರು.

Tags:
error: Content is protected !!