H D Kumaraswamy
ಮೈಸೂರು: ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನ ಮೇಕೆದಾಟು ಯೋಜನೆಗೆ ಒಪ್ಪಿಸಲಿ. ಆಗ ನಾನು ಐದೇ ನಿಮಿಷದಲ್ಲಿ ಪ್ರಧಾನಿ ಮಂತ್ರಿಗಳ ಒಪ್ಪಿಗೆ ಕೊಡಿಸುತ್ತೇನೆ. ನನ್ನ ಹಳೆಯ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ಕಾಂಗ್ರೆಸ್‌ನವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಅವರನ್ನ ಧಿಕ್ಕರಿಸುವ ಶಕ್ತಿಯೂ ಇಲ್ಲ.
ತಮಿಳುನಾಡು ಸರ್ಕಾರ ಧಿಕ್ಕರಿಸಿ ಮೇಕೆದಾಟು ಯೋಜನೆ ಮಾಡಿದರೆ ಅದು ಆಗುತ್ತದೆ. ಇಲ್ಲದಿದ್ದರೆ ಮೇಕೆದಾಟು ಯೋಜನೆ ಕಾಂಗ್ರೆಸ್ ಕೈಯಲ್ಲಿ ಸಾಧ್ಯವಿಲ್ಲ. ತಮಿಳುನಾಡು ಸರ್ಕಾರವನ್ನು ಒಪ್ಪಿಸದೇ ಮೇಕೆದಾಟು ಯೋಜನೆ ಕಚೇರಿ ತೆರೆದರೆ ಏನು ಪ್ರಯೋಜನ. ಮೇಕೆದಾಟು ಮಾಡುತ್ತೇವೆ ಎಂದು ಹೇಳಿದವರು ಕಾಂಗ್ರೆಸ್‌ನವರು, ನಾನಲ್ಲ. ಯೋಜನೆ ಮಾಡ್ತೇವೆ ಎಂದು ಹೇಳಿದವರು ಮಾಡಬೇಕು ತಾನೇ? ಎಂದು ಪ್ರಶ್ನೆ ಮಾಡಿದರು.
ಮೇಕೆದಾಟು ಯೋಜನೆ ಸಂಬಂಧ ಕಳೆದ ಎರಡೂವರೆ ವರ್ಷದಿಂದ ಸುಮ್ಮನೆ ಸಮಯ ಹಾಳು ಮಾಡುತ್ತಿದ್ದಾರೆ ಅಷ್ಟೇ. ಸುಮ್ಮನೆ ನನ್ನ ಮೇಲೆ ಜವಾಬ್ದಾರಿ ಹೊರಿಸಿದರೆ ನಾನು ಹೇಗೆ ಮಾಡಲು ಸಾಧ್ಯ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…