ಮೈಸೂರು ನಗರ

ಕಾಂಗ್ರೆಸ್‌ನವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನ ಮೇಕೆದಾಟು ಯೋಜನೆಗೆ ಒಪ್ಪಿಸಲಿ. ಆಗ ನಾನು ಐದೇ ನಿಮಿಷದಲ್ಲಿ ಪ್ರಧಾನಿ ಮಂತ್ರಿಗಳ ಒಪ್ಪಿಗೆ ಕೊಡಿಸುತ್ತೇನೆ. ನನ್ನ ಹಳೆಯ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ಕಾಂಗ್ರೆಸ್‌ನವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಅವರನ್ನ ಧಿಕ್ಕರಿಸುವ ಶಕ್ತಿಯೂ ಇಲ್ಲ.

ತಮಿಳುನಾಡು ಸರ್ಕಾರ ಧಿಕ್ಕರಿಸಿ ಮೇಕೆದಾಟು ಯೋಜನೆ ಮಾಡಿದರೆ ಅದು ಆಗುತ್ತದೆ. ಇಲ್ಲದಿದ್ದರೆ ಮೇಕೆದಾಟು ಯೋಜನೆ ಕಾಂಗ್ರೆಸ್ ಕೈಯಲ್ಲಿ ಸಾಧ್ಯವಿಲ್ಲ. ತಮಿಳುನಾಡು ಸರ್ಕಾರವನ್ನು ಒಪ್ಪಿಸದೇ ಮೇಕೆದಾಟು ಯೋಜನೆ ಕಚೇರಿ ತೆರೆದರೆ ಏನು ಪ್ರಯೋಜನ. ಮೇಕೆದಾಟು ಮಾಡುತ್ತೇವೆ ಎಂದು ಹೇಳಿದವರು ಕಾಂಗ್ರೆಸ್‌ನವರು, ನಾನಲ್ಲ. ಯೋಜನೆ ಮಾಡ್ತೇವೆ ಎಂದು ಹೇಳಿದವರು ಮಾಡಬೇಕು ತಾನೇ? ಎಂದು ಪ್ರಶ್ನೆ ಮಾಡಿದರು.

ಮೇಕೆದಾಟು ಯೋಜನೆ ಸಂಬಂಧ ಕಳೆದ ಎರಡೂವರೆ ವರ್ಷದಿಂದ ಸುಮ್ಮನೆ ಸಮಯ ಹಾಳು ಮಾಡುತ್ತಿದ್ದಾರೆ ಅಷ್ಟೇ. ಸುಮ್ಮನೆ ನನ್ನ ಮೇಲೆ ಜವಾಬ್ದಾರಿ ಹೊರಿಸಿದರೆ ನಾನು ಹೇಗೆ ಮಾಡಲು ಸಾಧ್ಯ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

11 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

11 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

18 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

18 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

18 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

18 hours ago