ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳದಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವನ ಕಪಾಲಿ ಬೆಟ್ಟವನ್ನೆ ಏಸು ಬೆಟ್ಟ ಮಾಡಲು ಹೊರಟ ಡಿಕೆ ಶಿವಕುಮಾರ್‌ರಿಂದ ನಮಗೆ ಧರ್ಮದ ಪಾಠ ಬೇಡ. ಅನ್ಯ ಧರ್ಮದವರನ್ನು ಬರೀ ಓಲೈಕೆಗಾಗಿ ಬ್ರದರ್ಸ್ ಎಂದು ಕರೆಯುವ ಡಿಕೆ ಶಿವಕುಮಾರ್ ನಮಗೆ ಧರ್ಮದ ಬಗ್ಗೆ ತಿಳುವಳಿಕೆ ಹೇಳುವುದು ಬೇಡ. ಸಿದ್ದರಾಮಯ್ಯ ತಂತ್ರ ಕಾಂಗ್ರೆಸ್ ಮೂರ್ಖರಿಗೆ ಅರ್ಥವಾಗುತ್ತಿಲ್ಲ. ಮುಸ್ಲಿಂಮರನ್ನು ತಮ್ಮ ಬೆನ್ನ ಹಿಂದೆ ಇಟ್ಟುಕೊಳ್ಳಲು ಸಿದ್ದರಾಮಯ್ಯ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಕರೆದಿದ್ದಾರೆ. ನಾಳೆ ಸಿಎಂ ಕುರ್ಚಿಗೆ ಕಂಟಕ ಬಂದಾಗ ಮುಸ್ಲಿಂ ಶಕ್ತಿ ತಮ್ಮ ಹಿಂದೆ ನಿಲ್ಲಿಸಿಕೊಳ್ಳಲು ಸಿದ್ದರಾಮಯ್ಯ ಎಣೆದಿರುವ ತಂತ್ರ ಇದು. ಕಾಂಗ್ರೆಸ್ ಅನ್ನು ಬ್ಲ್ಯಾಕ್ ಮೇಲ್ ಮಾಡಲು ಸಿದ್ದರಾಮಯ್ಯ ಮಾಡಿರುವ ಪ್ಲಾನ್ ಕಾಂಗ್ರೆಸ್‌ನವರಿಗೆ ಅರ್ಥವಾಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.
ಇನ್ನು ಆರ್‌ಎಸ್‌ಎಸ್ ಗೀತೆ ಹಾಡಿದ್ದಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮಸ್ತೆ ಸದಾ ವತ್ಸಲೆ ಅರ್ಥ ಮಾತೃ ಭೂಮಿಗೆ ವಂದಿಸು ಅಂತಾ. ಈ ಗೀತೆ ಹಾಡಿದ್ದಕ್ಕೆ ಡಿಕೆಶಿಗೆ ಕ್ಷಮೆ ಕೇಳುವ ಸ್ಥಿತಿ ಬಂದಿದೆ ಎಂದರೆ ಕಾಂಗ್ರೆಸ್‌ಗೆ ಮಾತೃಭೂಮಿಗೆ ಎಷ್ಟು ಗೌರವವಿದೆ ನೋಡಿ ಎಂದು ಪ್ರಶ್ನೆ ಮಾಡಿದರು.





