ಮೈಸೂರು ನಗರ

ಸಿದ್ದರಾಮಯ್ಯ ತಂತ್ರ ಕಾಂಗ್ರೆಸ್ ಮೂರ್ಖರಿಗೆ ಅರ್ಥವಾಗುತ್ತಿಲ್ಲ: ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳದಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವನ ಕಪಾಲಿ ಬೆಟ್ಟವನ್ನೆ ಏಸು ಬೆಟ್ಟ ಮಾಡಲು ಹೊರಟ ಡಿಕೆ ಶಿವಕುಮಾರ್‌ರಿಂದ ನಮಗೆ ಧರ್ಮದ ಪಾಠ ಬೇಡ. ಅನ್ಯ ಧರ್ಮದವರನ್ನು ಬರೀ ಓಲೈಕೆಗಾಗಿ ಬ್ರದರ್ಸ್ ಎಂದು ಕರೆಯುವ ಡಿಕೆ ಶಿವಕುಮಾರ್ ನಮಗೆ ಧರ್ಮದ ಬಗ್ಗೆ ತಿಳುವಳಿಕೆ ಹೇಳುವುದು ಬೇಡ. ಸಿದ್ದರಾಮಯ್ಯ ತಂತ್ರ ಕಾಂಗ್ರೆಸ್ ಮೂರ್ಖರಿಗೆ ಅರ್ಥವಾಗುತ್ತಿಲ್ಲ. ಮುಸ್ಲಿಂಮರನ್ನು ತಮ್ಮ ಬೆನ್ನ ಹಿಂದೆ ಇಟ್ಟುಕೊಳ್ಳಲು ಸಿದ್ದರಾಮಯ್ಯ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಕರೆದಿದ್ದಾರೆ. ನಾಳೆ ಸಿಎಂ ಕುರ್ಚಿಗೆ ಕಂಟಕ ಬಂದಾಗ ಮುಸ್ಲಿಂ ಶಕ್ತಿ ತಮ್ಮ ಹಿಂದೆ ನಿಲ್ಲಿಸಿಕೊಳ್ಳಲು ಸಿದ್ದರಾಮಯ್ಯ ಎಣೆದಿರುವ ತಂತ್ರ ಇದು. ಕಾಂಗ್ರೆಸ್ ಅನ್ನು ಬ್ಲ್ಯಾಕ್ ಮೇಲ್ ಮಾಡಲು ಸಿದ್ದರಾಮಯ್ಯ ಮಾಡಿರುವ ಪ್ಲಾನ್ ಕಾಂಗ್ರೆಸ್‌ನವರಿಗೆ ಅರ್ಥವಾಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಇನ್ನು ಆರ್‌ಎಸ್‌ಎಸ್ ಗೀತೆ ಹಾಡಿದ್ದಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮಸ್ತೆ ಸದಾ ವತ್ಸಲೆ ಅರ್ಥ ಮಾತೃ ಭೂಮಿಗೆ ವಂದಿಸು ಅಂತಾ. ಈ ಗೀತೆ ಹಾಡಿದ್ದಕ್ಕೆ ಡಿಕೆಶಿಗೆ ಕ್ಷಮೆ ಕೇಳುವ ಸ್ಥಿತಿ ಬಂದಿದೆ ಎಂದರೆ ಕಾಂಗ್ರೆಸ್‌ಗೆ ಮಾತೃಭೂಮಿಗೆ ಎಷ್ಟು ಗೌರವವಿದೆ ನೋಡಿ ಎಂದು ಪ್ರಶ್ನೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಅರಮೇರಿ, ಕಡಂಗಮೂರುರಲ್ಲಿ ಗಣಿಗಾರಿಕೆಗೆ ವಿರೋಧ

ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…

7 mins ago

ಸ್ವಚ್ಛ ನಗರಿಯ ಕೊಳಚೆ ಮುಖ

ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…

29 mins ago

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

35 mins ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

50 mins ago

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

12 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

12 hours ago