ಮೈಸೂರು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯ, ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಹರೀಶ್‌ಗೌಡ ನೇತೃತ್ವದಲ್ಲಿ ಯಾತ್ರೆ ಕೈಗೊಳ್ಳಲಾಗಿದ್ದು, ಇಂದು ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಯಾತ್ರೆ ಆರಂಭವಾಗಿದೆ.
ಯಾತ್ರೆಗೆ ಶಾಸಕ ತನ್ವೀರ್ ಸೇಠ್ ಚಾಲನೆ ನೀಡಿದ್ದು, 30ಕ್ಕೂ ಹೆಚ್ಚು ಬಸ್‌ಗಳು ಹಾಗೂ ಕಾರುಗಳಲ್ಲಿ 2000 ಸಾವಿರಕ್ಕೂ ಹೆಚ್ಚು ಜನರು ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿದ್ದಾರೆ.
ಇದನ್ನು ಓದಿ:ಧರ್ಮಸ್ಥಳ ಪ್ರಕರಣ: ಶೀಘ್ರದಲ್ಲೇ ಎಲ್ಲದಕ್ಕೂ ಸ್ಪಷ್ಟನೆ ಕೊಡುತ್ತೇನೆ ಎಂದ ಯೂಟ್ಯೂಬರ್ ಸಮೀರ್
ಪ್ರತಿ ವಾರ್ಡ್‌ನಿಂದ ಬಸ್ ವ್ಯವಸ್ಥೆ ಮಾಡಿರುವ ಶಾಸಕ ಹರೀಶ್ ಗೌಡ ಅವರು, ಇಂದು ಧರ್ಮಸ್ಥಳಕ್ಕೆ ತೆರಳುವ ಜನರು ಅಲ್ಲೇ ತಂಗಲಿದ್ದಾರೆ.
ನಾಳೆ ಬೆಳಿಗ್ಗೆ ಮಂಜುನಾಥ ಹಾಗೂ ಅಣ್ಣಪ್ಪಸ್ವಾಮಿ ದರ್ಶನ ಪಡೆದು ಯಾತ್ರಿಗಳು ವಾಪಸ್ಸಾಗಲಿದ್ದು, ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರುಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದಾರೆ.





