ಮೈಸೂರು ನಗರ

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಕೈ ಕಾರ್ಯಕರ್ತರಿಂದ ಧರ್ಮಸ್ಥಳ ಯಾತ್ರೆ

ಮೈಸೂರು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯ, ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಹರೀಶ್‌ಗೌಡ ನೇತೃತ್ವದಲ್ಲಿ ಯಾತ್ರೆ ಕೈಗೊಳ್ಳಲಾಗಿದ್ದು, ಇಂದು ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಯಾತ್ರೆ ಆರಂಭವಾಗಿದೆ.

ಯಾತ್ರೆಗೆ ಶಾಸಕ ತನ್ವೀರ್‌ ಸೇಠ್‌ ಚಾಲನೆ ನೀಡಿದ್ದು, 30ಕ್ಕೂ ಹೆಚ್ಚು ಬಸ್‌ಗಳು ಹಾಗೂ ಕಾರುಗಳಲ್ಲಿ 2000 ಸಾವಿರಕ್ಕೂ ಹೆಚ್ಚು ಜನರು ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿದ್ದಾರೆ.

ಇದನ್ನು ಓದಿ:ಧರ್ಮಸ್ಥಳ ಪ್ರಕರಣ: ಶೀಘ್ರದಲ್ಲೇ ಎಲ್ಲದಕ್ಕೂ ಸ್ಪಷ್ಟನೆ ಕೊಡುತ್ತೇನೆ ಎಂದ ಯೂಟ್ಯೂಬರ್‌ ಸಮೀರ್‌

ಪ್ರತಿ ವಾರ್ಡ್‌ನಿಂದ ಬಸ್ ವ್ಯವಸ್ಥೆ ಮಾಡಿರುವ ಶಾಸಕ ಹರೀಶ್‌ ಗೌಡ ಅವರು, ಇಂದು ಧರ್ಮಸ್ಥಳಕ್ಕೆ ತೆರಳುವ ಜನರು ಅಲ್ಲೇ ತಂಗಲಿದ್ದಾರೆ.

ನಾಳೆ ಬೆಳಿಗ್ಗೆ ಮಂಜುನಾಥ ಹಾಗೂ ಅಣ್ಣಪ್ಪಸ್ವಾಮಿ ದರ್ಶನ ಪಡೆದು ಯಾತ್ರಿಗಳು ವಾಪಸ್ಸಾಗಲಿದ್ದು, ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರುಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

4 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

4 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

4 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

4 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

5 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

5 hours ago