ಮೈಸೂರು: ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ಸಿಎಂ ಸಿದ್ದರಾಮಯಯ್ಯ ರಾಜ್ಯವನ್ನು ಅಭಿವೃದ್ಧಿಯ ಮುಂಚೂಣಿಗೆ ತರುತ್ತಿದ್ದಾರೆ. ಮೈಸೂರು ಜಿಲ್ಲೆ ಹಾಗೂ ಚಾಮರಾಜನಗರವನ್ನು ಅಭಿವೃದ್ಧಿಯ ಪಥದಲ್ಲಿ ತರುತ್ತಿರುವ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದರು.
ಇದು ಯಾರ ಸವಾಲಿಗೂ ಕರೆದ ಸಭೆಯಲ್ಲ. 2023ರಲ್ಲಿ ಕಾಂಗ್ರೆಸ್‌ಗೆ ಜನರೇ ಶಕ್ತಿ ತುಂಬಿದ್ದಾರೆ. ಗ್ಯಾರಂಟಿ ಯೋಜನೆಗಳ ಪ್ರಮುಖ ಯೋಜನೆಗಳಲ್ಲಿ ಶಕ್ತಿ ಯೋಜನೆ ಅತ್ಯಂತ ಯಶಸ್ವಿಯಾಗಿದೆ. ಮೈಸೂರಿನಲ್ಲಿ ಹಲವು ರಸ್ತೆಗಳು ನಿರ್ಮಾಣ ಆಗಿದ್ದು, ನಮ್ಮ ಸರ್ಕಾರ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ.
ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿದೆ. ಚುನಾವಣಾ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಲ್ಲ ಎಂದು ಹೇಳಿದರು.
ಯಾರು ಕೆಲಸ ಮಾಡಿಲ್ಲವೋ ಅವರು ಮೈ ಪರಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ವಿಪಕ್ಷಗಳ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.





