Congress party is the mastermind behind electoral malpractice: M.G. Mahesh
ಮೈಸೂರು: ಇಡೀ ವಿಶ್ವವೇ ಭಾರತದ ಚುನಾವಣಾ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‌ನ ಇತ್ತೀಚಿನ ವರ್ತನೆ ನೋಡಿದರೆ ರಾಷ್ಟ್ರದ್ರೋಹದ ಕೆಲಸ ಮಾಡುತ್ತಿದೆ ಎಂದು ಕಾಣಿಸುತ್ತಿದೆ. ಆಪರೇಷನ್ ಸಿಂಧೂರ ಪ್ರಕರಣದಿಂದ ಹಿಡಿದು ಇತ್ತೀಚಿನ ಡೊನಾಲ್ಡ್ ಟ್ರಂಪ್ ಹೇಳಿಕೆಯವರೆಗೂ ಕಾಂಗ್ರೆಸ್ ದೇಶಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿದೆ. ಮಾಲೆಂಗಾವ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯ ನಿರ್ದೋಷಿಗಳೆಂದು ತೀರ್ಪು ನೀಡಿದ ಬಳಿಕವೂ ಕಾಂಗ್ರೆಸ್ ನಾಯಕರು ವಿದ್ರೋಹದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಲೋಕಸಭಾ ಚುನಾವಣೆ ವೇಳೆ ಮತ ಕಳ್ಳತನ ನಡೆದಿದೆ ಎಂದು ಆರೋಪಿಸಿ ಆಗಸ್ಟ್.5ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಕಾಂಗ್ರೆಸ್ ಗೆದ್ದಾಗ ಇವಿಎಂ ಚೆನ್ನಾಗಿವೆ ಎನ್ನುತ್ತಾರೆ. ಕಾಂಗ್ರೆಸ್ ಸೋತಾಗ ಇವಿಎಂ ಮೇಲೆ ಆರೋಪ ಮಾಡುತ್ತಾರೆ. ಸ್ವಾತಂತ್ರ್ಯ ನಂತರ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಯಾವ ರೀತಿ ಗೆಲ್ಲುತ್ತಿತ್ತು ಎಂಬುದು ಗೊತ್ತಿದೆ. ಇವಿಎಂ ಬಂದನಂತರ ಚುನಾವಣಾ ಅಕ್ರಮಕ್ಕೆ ತೆರೆ ಬಿದ್ದಿದೆ. ಇಡೀ ವಿಶ್ವವೇ ಭಾರತದ ಚುನಾವಣಾ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಆದರೆ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗದ ಬಗ್ಗೆ ಅಪನಂಬಿಕೆ ಮೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಯಾವ ಪುರುಷಾರ್ಥಕ್ಕೆ ರಾಹುಲ್ ಗಾಂಧಿ ರಾಜ್ಯಕ್ಕೆ ಬರ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಹಾಗು ಆನಂತರ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಾಗ ಇವಿಎಂ ಸರಿಯಾಗಿ ಇದ್ದವಾ? ಎಂದು ಪ್ರಶ್ನಿಸಿದ ಅವರು, ನೈತಿಕತೆಯೇ ಇಲ್ಲದ ಗಲೀಜು ವ್ಯಕ್ತಿಯಂತೆ ರಾಹುಲ್ ಗಾಂಧಿ ವರ್ತಿಸುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಮುಂದಿಟ್ಟುಕೊಂಡು ಇಡೀ ದೇಶದಾದ್ಯಂತ ವಿದ್ರೋಹದ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ.
ವೇಮುಲ ಕಾನೂನನ್ನು ರಾಜ್ಯದಲ್ಲಿ ಜಾರಿಗೊಳಿಸಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಚುನಾವಣೆಯಲ್ಲಿ ಮೊದಲು ಅಕ್ರಮ ನಡೆಸಿದ್ದು ಕಾಂಗ್ರೆಸ್ ನಾಯಕಿ ಇಂದಿರಾಗಾಂಧಿ. ಚುನಾವಣಾ ಅಕ್ರಮದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಇಂದಿರಾಗಾಂಧಿಗೆ ಚೀಮಾರಿ ಹಾಕಿತ್ತು. ಆಗ ಇಂದಿರಾಗಾಂಧಿ ತಪ್ಪಿಸಿಕೊಳ್ಳಲು ತುರ್ತು ಪರಿಸ್ಥಿತಿ ಹೇರಿದ್ದರು. ಚುನಾವಣಾ ಅಕ್ರಮದ ರೂವಾರಿ ಕಾಂಗ್ರೆಸ್ ಪಾರ್ಟಿ ಎಂದು ವಾಗ್ದಾಳಿ ನಡೆಸಿದರು.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…