Mysore
16
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಮೈಸೂರು| ಗ್ಯಾಸ್‌ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

ಪ್ರಶಾಂತ್‌ ಎನ್‌ ಮಲ್ಲಿಕ್‌ 

ಮೈಸೂರು: ಗ್ಯಾಸ್‌ ಸಿಲಿಂಡರ್‌ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು.

ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರವೇ ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆಯ ಜೊತೆಗೆ ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿದೆ. ಈ ಬಗ್ಗೆ ಪ್ರಶ್ನೆ ಮಾಡಲು ರಾಜ್ಯ ಬಿಜೆಪಿ ನಾಯಕರಿಗೆ ತಾಕತ್ತಿಲ್ಲ ಎಂದು ಕಿಡಿಕಾರಿದರು.

ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಭಾಗಿಯಾಗಿದ್ದರು.

 

Tags:
error: Content is protected !!