ಪ್ರಶಾಂತ್ ಎನ್ ಮಲ್ಲಿಕ್
ಮೈಸೂರು: ಗ್ಯಾಸ್ ಸಿಲಿಂಡರ್ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರವೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಜೊತೆಗೆ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿದೆ. ಈ ಬಗ್ಗೆ ಪ್ರಶ್ನೆ ಮಾಡಲು ರಾಜ್ಯ ಬಿಜೆಪಿ ನಾಯಕರಿಗೆ ತಾಕತ್ತಿಲ್ಲ ಎಂದು ಕಿಡಿಕಾರಿದರು.
ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…