Mysore
19
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಕಾಂಗ್ರೆಸ್‌ ಸರ್ವಾಧಿಕಾರಿ ಧೋರಣೆ ತೋರುತ್ತಿದೆ: ಆರ್‌. ಅಶೋಕ್

ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ. ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧ್ವನಿ ಎತ್ತುವವರನ್ನು ತಡೆಯಲು ಪೊಲೀಸ್‌ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಸಾಮೂಹಿಕವಾಗಿ ಜೈಲ್‌ ಭರೋ ಚಳುವಳಿ ಮಾಡಬೇಕಾಗುತ್ತದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಎಚ್ಚರಿಕೆ ನೀಡಿದರು.

ಮುಡಾ ಹಗರಣ ವಿರೋಧಿಸಿ ಪ್ರತಿಭಟನೆಗೆ ಶುಕ್ರವಾರ(ಜು.12) ನಗರಕ್ಕೆ ಬಂದ ಆರ್.ಅಶೋಕ್‌ ಪ್ರತಿಭಟನಾ ಸ್ಥಳಕ್ಕೆ ಗೂಡ್ಸ್‌ ಆಟೋದಲ್ಲಿ ಆಗಮಿಸಿದರು. ಈ ವೇಳೆ ಮಾತನಾಡಿದ ಅವರು, ಮೈಸೂರಲ್ಲಿ ಸೈಟು ಪಡೆಯಲು 80 ಸಾವಿರ ಮಂದಿ ಅರ್ಜಿ ಹಾಕಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಕುಟುಂಬ ಹಾಗೂ ಬೆಂಬಲರಿಗೆ ಮಾತ್ರ ಸೈಟ್‌ ಕೊಟ್ಟಿದ್ದಾರೆ. ಜನರಿಗೆ ಸೈಟ್‌ ಕೊಡದ ಮುಡಾ, ಇವರಿಗೆಲ್ಲಾ ಹೇಗೆ ಕೊಡ್ತು? ಮುಡಾದಲ್ಲಿ ಬೃಹತ್‌ ಹಗರಣವೇ ನಡೆದಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ಸದನದಲ್ಲಿ ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಪ್ರಸ್ತಾಪಿಸುತ್ತೇವೆ ಎಂದರು.

ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ. ನಮ್ಮ ಪಕ್ಷದ ಅಧ್ಯಕ್ಷರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್‌ ಕಿಡಿ ಕಾರಿದರು.

Tags:
error: Content is protected !!