ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಧ್ವನಿ ಎತ್ತುವವರನ್ನು ತಡೆಯಲು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಸಾಮೂಹಿಕವಾಗಿ ಜೈಲ್ ಭರೋ ಚಳುವಳಿ ಮಾಡಬೇಕಾಗುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದರು.
ಮುಡಾ ಹಗರಣ ವಿರೋಧಿಸಿ ಪ್ರತಿಭಟನೆಗೆ ಶುಕ್ರವಾರ(ಜು.12) ನಗರಕ್ಕೆ ಬಂದ ಆರ್.ಅಶೋಕ್ ಪ್ರತಿಭಟನಾ ಸ್ಥಳಕ್ಕೆ ಗೂಡ್ಸ್ ಆಟೋದಲ್ಲಿ ಆಗಮಿಸಿದರು. ಈ ವೇಳೆ ಮಾತನಾಡಿದ ಅವರು, ಮೈಸೂರಲ್ಲಿ ಸೈಟು ಪಡೆಯಲು 80 ಸಾವಿರ ಮಂದಿ ಅರ್ಜಿ ಹಾಕಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಕುಟುಂಬ ಹಾಗೂ ಬೆಂಬಲರಿಗೆ ಮಾತ್ರ ಸೈಟ್ ಕೊಟ್ಟಿದ್ದಾರೆ. ಜನರಿಗೆ ಸೈಟ್ ಕೊಡದ ಮುಡಾ, ಇವರಿಗೆಲ್ಲಾ ಹೇಗೆ ಕೊಡ್ತು? ಮುಡಾದಲ್ಲಿ ಬೃಹತ್ ಹಗರಣವೇ ನಡೆದಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ಸದನದಲ್ಲಿ ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಪ್ರಸ್ತಾಪಿಸುತ್ತೇವೆ ಎಂದರು.
ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ. ನಮ್ಮ ಪಕ್ಷದ ಅಧ್ಯಕ್ಷರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ ಕಾರಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…