ಮೈಸೂರು ನಗರ

ಮೈಸೂರು| ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು ಖಂಡಿಸಿ ಮೈಸೂರಿನಲ್ಲಿಂದು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದು ರಾಜ್ಯಪಾಲರ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ “ರಾಜ್ಯಪಾಲರು ರಾಜ್ಯ ಬಿಟ್ಟು ತೆರಳಬೇಕು” ಎಂಬ ಘೋಷಣೆಗಳು ಮೊಳಗಿದವು.

ಪ್ರತಿಭಟನೆಯನ್ನು ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಹಾಗೂ ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ನೇತೃತ್ವದಲ್ಲಿ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಎಂ.ಕೆ.ಸೋಮಶೇಖರ್ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಏಜೆಂಟ್‌ನಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದಲ್ಲದೆ, ಸರ್ಕಾರದ ಭಾಷಣವನ್ನು ಮೊಟಕುಗೊಳಿಸುವ ಮೂಲಕ ರಾಜ್ಯಪಾಲರು ಸಂವಿಧಾನದ ಉಲ್ಲಂಘನೆ ಮಾಡಿದ್ದಾರೆ. ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯಪಾಲರ ನಡೆ ಪ್ರಜಾಪ್ರಭುತ್ವ ವಿರೋಧಿ ಹಾಗೂ ಸಂವಿಧಾನ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕೂಡಲೇ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅವರನ್ನು ವಜಾಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

9 mins ago

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

2 hours ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

2 hours ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

2 hours ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

2 hours ago

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್‌ ಅರೆಸ್ಟ್‌ ಪ್ರಕರಣ: ಎಚ್ಚೆತ್ತುಕೊಳ್ಳದ ಜನತೆ

ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…

2 hours ago