ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು, ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಹಿನ್ನೆಲೆ ಸಿಎಂ ಈ ಆದೇಶ ಹೊರಡಿಸಿದ್ದಾರೆ. ನಾಡದೇವಿಗೆ ಚಿನ್ನದ ರಥ ನಿರ್ಮಿಸಬೇಕು ಎಂಬ ಸಾರ್ವಜನಿಕರ ಬೇಡಿಕೆಯನ್ನು ಅರಿತು, ಸಂಕಲ್ಪ ಮಾಡಿಕೊಂಡು ಪ್ರಯತ್ನಿಸಲಾಗಿತ್ತು. ಸಿಎಂ ಆದೇಶದಿಂದ ಈಗ ಆ ಪ್ರಯತ್ನದಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಂತಾಗಿದೆ.
ಈ ಹಿನ್ನೆಲೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು, ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದರು. ಚಿನ್ನದ ರಥ ನಿರ್ಮಾಣಕ್ಕೆ ಬೇಕಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರ ತಯಾರಿಸಬೇಕು. ದೇವಸ್ಥಾನದಲ್ಲಿ ಈ ಉದ್ದೇಶಕ್ಕೋಸ್ಕರ ಪ್ರತ್ಯೇಕ ಹುಂಡಿಯೊಂದನ್ನು ಇಡಬೇಕು. ಬೆಟ್ಟಕ್ಕೆ ಭೇಟಿ ನೀಡುವ ಸಾರ್ವಜನಿಕರು ಅದರಲ್ಲಿ ಹಣ ಹಾಗೂ ಚಿನ್ನವನ್ನು ಹಾಕಲು ಅವಕಾಶ ನೀಡಬೇಕು. ಸಂಗ್ರಹಿತ ಕಾಣಿಕೆ ಹಣಕ್ಕಿಂತ ಹೆಚ್ಚಿಗೆ ಬೇಕಾಗುವ ಹಣವನ್ನು ಸರ್ಕಾರ ಭರಿಸಬೇಕು ಎಂದು ಮನವಿ ಮಾಡಿದ್ದರು. ದಿನೇಶ್ ಗೂಳಿಗೌಡ ಅವರ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…