_Sa Ra Mahesh (1)
ಮೈಸೂರು ನಗರ: ರಾಜ್ಯದಲ್ಲಿ ಈಗಾಗಲೇ 7 ಲಕ್ಷದ 81 ಸಾವಿರದ 95 ಕೋಟಿ ರೂ ರಾಜ್ಯದ ಸಾಲವಿದ್ದು, 4 ಲಕ್ಷದ 95 ಸಾವಿರ ಕೋಟಿ ಸಾಲವನ್ನು ಸಿಎಂ ಸಿದ್ದರಾಮಯ್ಯ ಒಬ್ಬರೇ ಮಾಡಿದ್ದಾರೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ಬಾರಿ ಸಿಎಂ ಅದಾಗ ಸಿದ್ದರಾಮಯ್ಯ ಕೊಟ್ಟ ಆಡಳಿತ ಎಲ್ಲಿ ಹೋಯ್ತು? ಈಗ ಇಡೀ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಸಿದ್ದರಾಮಯ್ಯ ಅವರೇ ನಿಮ್ಮ ಹಿಂಬಾಲಕರಿಗೆ ಹೇಳಿ. ಈ ಬಗ್ಗೆ ಸಾರ್ವಜನಿಕ ಚರ್ಚೆ ಕೂಡ ಮಾಡೋಣ ಬನ್ನಿ ಎಂದು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದರು.
ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಸಾ.ರಾ.ಮಹೇಶ್ ಪಂಥಾಹ್ವಾನ
ಇನ್ನು ಮೈಸೂರು ಜಿಲ್ಲೆಯಲ್ಲಿ ಕ್ರೈಮ್ ರೇಟ್ ಜಾಸ್ತಿಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ನಕಲಿ ಆರ್.ಟಿ.ಐ ಅಂಗ, ಪುಡಿರೌಡಿಗಳ ಅಂಗ ಇವೆಲ್ಲವೂ ತಲೆ ಎತ್ತಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು 2 ವರ್ಷ ಆಗೋಯ್ತು. ಇದುವರೆಗೂ ಜನರಿಗೆ ಒಂದೇ ಒಂದು ಸೂರು ಕೊಟ್ಟಿಲ್ಲ. ಸಾಲ ಮಾಡೋಕೆ ಇಷ್ಟು ವರ್ಷದ ಅನುಭವ ಬೇಕಾ? ಎಂದು ಕಿಡಿಕಾರಿದ ಅವರು, ಮಧ್ಯಮ ವರ್ಗದ ಜನರ ಪರಿಸ್ಥಿತಿ ನಿಮಗೆ ಗೊತ್ತಾ? ಎಂದು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ • ಚಿರಂಜೀವಿ ಸಿ…
• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…