ಮೈಸೂರು ನಗರ

ಇಡೀ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು ನಗರ: ರಾಜ್ಯದಲ್ಲಿ ಈಗಾಗಲೇ 7 ಲಕ್ಷದ 81 ಸಾವಿರದ 95 ಕೋಟಿ ರೂ ರಾಜ್ಯದ ಸಾಲವಿದ್ದು, 4 ಲಕ್ಷದ 95 ಸಾವಿರ ಕೋಟಿ ಸಾಲವನ್ನು ಸಿಎಂ ಸಿದ್ದರಾಮಯ್ಯ ಒಬ್ಬರೇ ಮಾಡಿದ್ದಾರೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ಬಾರಿ ಸಿಎಂ ಅದಾಗ ಸಿದ್ದರಾಮಯ್ಯ ಕೊಟ್ಟ ಆಡಳಿತ ಎಲ್ಲಿ ಹೋಯ್ತು? ಈಗ ಇಡೀ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಸಿದ್ದರಾಮಯ್ಯ ಅವರೇ ನಿಮ್ಮ ಹಿಂಬಾಲಕರಿಗೆ ಹೇಳಿ. ಈ ಬಗ್ಗೆ ಸಾರ್ವಜನಿಕ ಚರ್ಚೆ ಕೂಡ ಮಾಡೋಣ ಬನ್ನಿ ಎಂದು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದರು.

ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಸಾ.ರಾ.ಮಹೇಶ್ ಪ‌ಂಥಾಹ್ವಾನ

ಇನ್ನು ಮೈಸೂರು ಜಿಲ್ಲೆಯಲ್ಲಿ ಕ್ರೈಮ್ ರೇಟ್ ಜಾಸ್ತಿಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ನಕಲಿ ಆರ್.ಟಿ.ಐ ಅಂಗ, ಪುಡಿರೌಡಿಗಳ ಅಂಗ ಇವೆಲ್ಲವೂ ತಲೆ ಎತ್ತಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು 2 ವರ್ಷ ಆಗೋಯ್ತು. ಇದುವರೆಗೂ ಜನರಿಗೆ ಒಂದೇ ಒಂದು ಸೂರು ಕೊಟ್ಟಿಲ್ಲ. ಸಾಲ ಮಾಡೋಕೆ ಇಷ್ಟು ವರ್ಷದ ಅನುಭವ ಬೇಕಾ? ಎಂದು ಕಿಡಿಕಾರಿದ ಅವರು, ಮಧ್ಯಮ ವರ್ಗದ ಜನರ ಪರಿಸ್ಥಿತಿ ನಿಮಗೆ ಗೊತ್ತಾ? ಎಂದು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

5 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

6 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

9 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

9 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

10 hours ago