ಮೈಸೂರು: ಮೈಸೂರಿನ 9ನೇ ಹೆಚ್ಚುವರಿ ನ್ಯಾಯಾಲಯವು ಮೈಸೂರು ಮೆಡಿಕಲ್ ಕಾಲೇಜು ಚರಾಸ್ತಿಗಳ ಜಪ್ತಿಗೆ ಆದೇಶ ಹೊರಡಿಸಿದೆ.
1989ರಿಂದ 2016ರವರೆಗೆ ಮೈಸೂರು ಮೆಡಿಕಲ್ ಪಿ.ಜಿ ಹಾಸ್ಟೆಲ್, ಹೋಲ್ಡ್ ಎಕ್ಸಿಬಿಷನ್ ಗ್ರೌಂಡ್ ಬಿಲ್ಡಿಂಗ್ ನಲ್ಲಿ ಅಡುಗೆ ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ ಹಲವಾರು ಕಾರ್ಮಿಕರನ್ನು ಡೀನ್ ಹಾಗೂ ವಾರ್ಡನ್ ಏಕಾಏಕಿ ಕೆಲಸದಿಂದ ತೆಗೆದುಹಾಕಿದ್ದರು.
ಈ ಹಿನ್ನೆಲೆಯಲ್ಲಿ ಕಾರ್ಮಿಕರು ಕಳೆದ 2016ರಲ್ಲಿಯೇ ನ್ಯಾಯಾಲಯಕ್ಕೆ ಅರ್ಜಿ ಹಾಕಿ ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಲೇಬರ್ ಕೋರ್ಟ್ ಕಳೆದ 2019ರಲ್ಲಿ ಕಾರ್ಮಿಕರಿಗೆ ಕೆಲಸ ಕೊಡಬೇಕು ಮತ್ತು ಹಳೆಯ ವೇತನ ಬಾಕಿಯನ್ನೂ ಕೊಡಬೇಕು ಎಂದು ಆದೇಶ ಹೊರಡಿಸಿತ್ತು. ಇದೆಲ್ಲದರ ಮಧ್ಯೆ ಹೈಕೋರ್ಟ್‌ನಲ್ಲೂ ಸಹ ಆದೇಶ ಕೂಲಿ ಕಾರ್ಮಿಕರ ಪರವೇ ಬಂದಿತ್ತು.
ಕಾರ್ಮಿಕರ ಪರ ಕೋರ್ಟ್ ಆದೇಶ ಹೊರಡಿಸಿದ್ದರೂ, ಮೈಸೂರು ಮೆಡಿಕಲ್ ಸಂಸ್ಥೆ ಕಾರ್ಮಿಕರಿಗೆ ಸುಮಾರು 42 ಲಕ್ಷ ವೇತನ ಬಾಕಿ ಉಳಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮೈಸೂರು ಮೆಡಿಕಲ್ ಕಾಲೇಜು ಚರಾಸ್ತಿಗಳ ಜಪ್ತಿಗೆ ಕೋರ್ಟ್ ಆದೇಶ ಹೊರಡಿಸಿದೆ.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…