ಮೈಸೂರು ನಗರ

ಕೋವಿಡ್‌ ಹಗರಣದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆಯಾಗಲಿ: ಸಂಸದ ಡಾ.ಕೆ.ಸುಧಾಕರ್‌

ಮೈಸೂರು: ಕೋವಿಡ್‌ ಸಮಯದಲ್ಲಿ ನಡೆದಿದೆ ಎನ್ನಲಾದ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ
ಸಂಸದ ಡಾ.ಕೆ.ಸುಧಾಕರ್‌ ಪ್ರತಿಕ್ರಿಯೆ ನೀಡಿದ್ದು, ಯಾರದರೂ ತಪ್ಪು ಮಾಡಿದರೆ ಶಿಕ್ಷೆ ಕೊಡಲಿ ಎಂದು ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಬಂದು 16 ತಿಂಗಳಾಗಿದೆ. ಈಗ ಪ್ರಕರಣ ಸಂಬಂಧ ಮಧ್ಯಂತರ ವರದಿ ತರಿಸಿಕೊಂಡಿದ್ದಾರೆ. ಅಂತಿಮ ವರದಿ ಯಾವಾಗ ಬರುತ್ತೆ ನನಗೆ ಗೊತ್ತಿಲ್ಲ ಎಂದರು.

ಇನ್ನು ಸರ್ಕಾರಗಳು ಸೈಕಲ್‌ ಇದ್ದ ಹಾಗೆ, ಚಕ್ರ ತಿರುಗುವ ರೀತಿ ತಿರುಗುತ್ತೆ. ನಾವು ಒಂದೇ ಒಂದು ಪ್ರಕರಣವನ್ನೂ ಈ ರೀತಿ ಮಾಡಿಲ್ಲ. ಒಂದು ದ್ವೇಷದ ರಾಜಕಾರಣವನ್ನೂ ಸಹ ಮಾಡಿಲ್ಲ. ಖುರ್ಚಿ ಇರುವವರೆಗೂ ಮಾಡುತ್ತಾರೆ ಮಾಡಲಿ ಎಂದು ಕಿಡಿಕಾರಿದರು.

ಇನ್ನು ದ್ವೇಷದ ರಾಜಕಾರಣವನ್ನು ಕಲಿಸಿಕೊಡುತ್ತಿರುವುದು ಕಾಂಗ್ರೆಸ್‌, ನಾವು ಕೂಡ ದ್ವೇಷದ ರಾಜಕಾರಣ ಕಲಿಯಬೇಕು ಎಂದು ಕಾಂಗ್ರೆಸ್‌ ಸರ್ಕಾರಕ್ಕೆ ಟಾಂಗ್‌ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ವಿರೋಧಿಸಿ ಮುಂದುವರಿದ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…

23 mins ago

ಸದನದಲ್ಲಿ ಅಗೌರವ ತೋರಿದ ಶಾಸಕರ ವಿರುದ್ಧ ಕ್ರಮ ಆಗಲಿ: ಆರ್.‌ಅಶೋಕ್‌

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.…

30 mins ago

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

1 hour ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

2 hours ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

2 hours ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

3 hours ago