Mysore
30
few clouds

Social Media

ಶನಿವಾರ, 18 ಏಪ್ರಿಲ 2026
Light
Dark

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಕಾಲಘಟ್ಟದ ಅಗತ್ಯವಾಗಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ ರಾಮ್ ಅವರ ಸಂಘಗಳ ಒಕ್ಕೂಟದ ವತಿಯಿಂದ ಕಲಾಮಂದಿರದದಲ್ಲಿ ಆಯೋಜಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತಿಹಾಸವನ್ನು ಮರೆತವರು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ ಎಂಬ ಅಂಬೇಡ್ಕರ್ ಅವರ ನುಡಿಯಂತೆ, ಇಂದಿನ ಯುವ ಪೀಳಿಗೆಗೆ ಮಹಾನ್ ವ್ಯಕ್ತಿಗಳ ಇತಿಹಾಸ, ಹೋರಾಟ, ತ್ಯಾಗ, ಚಿಂತನೆಗಳ ಬಗ್ಗೆ ಅರಿವು ಮೂಡಿಸುವುದು ಅತ್ಯಗತ್ಯ ಎಂದು ಹೇಳಿದರು.

ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೆ, ತಮ್ಮ ಅಗಾಧ ಪಾಂಡಿತ್ಯ ಮತ್ತು ವಿದ್ವತ್ತಿನಿಂದ ಸಂವಿಧಾನ ರಚನೆಯ ಜವಾಬ್ದಾರಿಯನ್ನು ಪಡೆದರು. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು, ಶಿಕ್ಷಣ ಮತ್ತು ಜ್ಞಾನದಿಂದ ಜೀವನ ಹಾಗೂ ಸಮಾಜ ಎರಡನ್ನು ಉತ್ತಮವಾಗಿ ರೂಪಿಸಬಹುದು ಎಂದರು.

ಶೋಷಣೆಯ ವಿರುದ್ಧ ದನಿ ಎತ್ತಲು ‘ಶಿಕ್ಷಣ, ಸಂಘಟನೆ ಮತ್ತು ಹೋರಾಟ’ ಎಂಬ ಅಂಬೇಡ್ಕರ್ ಅವರ ಸಿದ್ಧಾಂತಗಳು ಇಂದಿಗೂ ಪ್ರಸ್ತುತ. ಹಕ್ಕುಗಳನ್ನು ಪಡೆದುಕೊಳ್ಳಲು ಸಂಘಟಿತ ಹೋರಾಟ ಅನಿವಾರ್ಯ ಎಂದು ಅವರು ತಿಳಿಸಿದರು.

ಡಾ: ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ತಿಳಿದುಕೊಳ್ಳಲು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಿಗಾಗಿ ಅಂಬೇಡ್ಕರ್ ಅವರ ಭಾಷಣಗಳ ಪುನರುಚ್ಚಾರಣೆ ಮತ್ತು ‘ಭೀಮ ಗೀತೆ’ ಹಾಡುವ ಸ್ಪರ್ಧೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ, ಶಾಸಕರಾದ ಕೆ.ಹರೀಶ್‌ ಗೌಡ, ಡಾ.ಡಿ.ತಿಮ್ಮಯ್ಯ, ಕೆ. ಶಿವಕುಮಾರ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ‌ ಎಸ್. ಯುಕೇಶ್ ಕುಮಾರ್, ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್‌ ಆಸಿಫ್‌, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ.ಬಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್ -1 ನ ಜನಾರ್ಧನ್ ಎ. ಏನ್, ಅಪಾರ ಪೊಲೀಸ್ ಆಯುಕ್ತ ನಾಗೇಶ್, ಗಣ್ಯರಾದ ಮಲೆಯೂರು ಸೋಮಣ್ಣ, ವಿವಿಧ ಸಂಘನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

 

Tags:
error: Content is protected !!