ಮೈಸೂರು ನಗರ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್‌ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ಮಂಡ್ಯಗೆ ಏನ್ ತಂದರು? ರಾಜ್ಯಕ್ಕೆ ಏನು ತಂದ್ರು ? ಅಂತಾ ಪ್ರತಿ ನಿತ್ಯ ಮಂಡ್ಯ ಶಾಸಕರು ಸಣ್ಣತನದಲ್ಲಿ ಪ್ರಶ್ನೆ ಮಾಡ್ತಿದ್ದಾರೆ. ಮಂಡ್ಯ ಕಾಂಗ್ರೆಸ್ ಶಾಸಕರ ಪ್ರಶ್ನೆಗಳಿಗೆ ಕೇಂದ್ರ ಬಜೆಟ್‌ನಲ್ಲಿ ಉತ್ತರವಿದೆ. ಆಟೋಮೇಟಿವ್ ರಿಸರ್ಚ್ ಇಂಡಿಯಾ ಸಂಸ್ಥೆ‌ಯ ಘಟಕ ತೆರೆಯಲು 100 ಎಕರೆ ಜಾಗವನ್ನು ಮಂಡ್ಯದಲ್ಲೇ ಕೊಡಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಆಟೋಮೊಬೈಲ್ ಇಂಡಸ್ಟ್ರಿ ಸ್ಥಾಪನೆಗೆ ಕೇಂದ್ರ ಸರಕಾರ ಬದ್ಧವಾಗಿದೆ. ಇದಕ್ಕಾಗಿ ಭೂಮಿ ಕೊಡಲು ಸಿಎಂಗೆ ನಾನೇ ಪತ್ರ ಬರೆದಿದ್ದೇನೆ. ನಾನು ನಾಟಕವಾಡಲು ಪತ್ರ ಬರೆದಿಲ್ಲ. ನಾಟಕವಾಡಲು ಪ್ರಧಾನಿಗಳು ನನಗೆ ಈ ಸ್ಥಾನ ಕೊಟ್ಟಿಲ್ಲ. ರಾಜ್ಯದ ಕೈಗಾರಿಕಾ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇನೆ. ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಯಾವ ಅನ್ಯಾಯವೂ ಆಗಿಲ್ಲ ಎಂದು ಕಾಂಗ್ರೆಸ್‌ ನಾಯಕರ ಆರೋಪವನ್ನು ತಳ್ಳಿಹಾಕಿದರು.

ಇನ್ನು ಕೇಂದ್ರ ಸರ್ಕಾರ ಕೊಟ್ಟ ದುಡ್ಡನ್ನು ರಾಜ್ಯ ಸರ್ಕಾರ ಸರಿಯಾಗಿ ಬಳಸಿಕೊಂಡಿಲ್ಲ. 16ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಬರಬೇಕಿದ್ದದ್ದು 50 ಸಾವಿರ ಕೋಟಿ ರೂ. ಈಗ ಅದನ್ನು 63 ಸಾವಿರ ಕೋಟಿ ರೂ ಗೆ ಏರಿಸಲಾಗಿದೆ. ವಿಶ್ವೇಶ್ವರಯ್ಯ ಸ್ಟಿಲ್ ಫ್ಯಾಕ್ಟರಿ ಪುನಶ್ಚೇತನಕ್ಕೆ 4 ರಿಂದ 5 ಸಾವಿರ ಕೋಟಿ ರೂ ಕೊಡುತ್ತಿದ್ದೇವೆ. ಎಚ್.ಎಂ.ಟಿ. ಕಂಪನಿ ಪುನರ್ ಆರಂಭಕ್ಕೆ ನಾನು ಬದ್ಧವಾಗಿದ್ದೇನೆ. ಅರಣ್ಯ ಇಲಾಖೆಯವರು ಎಚ್.ಎಂ.ಟಿ. ಕಂಪನಿ ಜಾಗ ನಮ್ಮದು ಎಂದು ತಕರಾರು ತೆಗೆದುಕೊಂಡು ಕೂತಿದ್ದಾರೆ. ನಾನು ಏನು ಮಾಡಲಿ. ರಾಜ್ಯದ ಯಾರಾದರೂ ಒಬ್ಬರು ಮಂತ್ರಿ ಬಂದು ನನ್ನ ಬಳಿ ರಾಜ್ಯಕ್ಕೆ ಇಂತಹ ಪ್ರಾಜೆಕ್ಟ್ ತರಿಸಿ ಕೊಡಿ ಎಂದು ಕೇಳಿದ್ದಿರಾ? ಮೆಟ್ರೋ ಬೆಲೆ ಏರಿಕೆಗೆ ಕೇಂದ್ರ ಹೊಣೆ ಎಂದು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ಕೇಂದ್ರ ಸರಕಾರದ ಜೊತೆ ರಾಜ್ಯ ಸರಕಾರ ಒಳ್ಳೆ ಸಂಬಂಧ ಇಟ್ಟು ಕೊಳ್ಳಲಿ. ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ಕೆಲಸ ಬಿಡಬೇಕು. ಪ್ರಧಾನ ಮಂತ್ರಿಗಳನ್ನು ಬಾಯಿಗೆ ಬಂದಂತೆ ಬೈಯ್ಯೋದು. ಅಮೇಲೆ ಪತ್ರ ಕಳಿಸೋದು. ಈ ವರ್ತನೆಯನ್ನು ರಾಜ್ಯ ಸರಕಾರ ಬದಲಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನು ನನ್ನ ಜೊತೆ ರಾಜ್ಯ ಸರ್ಕಾರಕ್ಕೆ ಮಾತನಾಡಲು ego ಸಮಸ್ಯೆ ಇರಬಹುದು ಅಥವಾ ಅಸೂಯೆ ಭಾವನೆ ಇರಬಹುದು. ಜೆಡಿಎಸ್ ಮುಳುಗಿ ಹೋಯ್ತು ಎಂದ ಕೊಂಡವರಿಗೆ ಜೆಡಿಎಸ್‌ಗೆ ಇಷ್ಟು ದೊಡ್ಡ ಸ್ಥಾನ ಸಿಕ್ಕಿದೆ. ಈ ಕಾರಣಕ್ಕೆ ಅಸೂಯೆ ಇರಬಹುದು ನಮ್ಮ ಬಗ್ಗೆ. ಈ ಸಿಎಂ ಗೆ ಜಾಣ ಕಿವುಡು ಇದೆ. ಕಾಂಗ್ರೆಸ್ ರಾಜ್ಯವನ್ನು ದಿವಾಳಿ ಎಬ್ಬಿಸಲು ಅಧಿಕಾರಕ್ಕೆ ಬಂದಿದೆ. ದಾಖಲೆ ಬಜೆಟ್ ಮಂಡಿಸಿ ರಾಜ್ಯವನ್ನು ಸಿಎಂ ದಿವಾಳಿ ಮಾಡುತ್ತಾರೆ. ಇವತ್ತಿನ ರಾಜ್ಯದ ಪರಿಸ್ಥಿತಿ ಗಮನಿಸಿದರೆ ನಾನು ಇಲ್ಲೇ ಇರಬೇಕಿತ್ತು ಅನ್ನಿಸುತ್ತಿದೆ. ನಾನು ವಾಪಸ್ ಇಲ್ಲಿಗೆ ಬರುವ ಟೈಂ ಬಂದಾಗ ಬರ್ತಿನಿ. ಕುಟುಂಬ ರಾಜಕಾರಣದ ವಿಚಾರದಲ್ಲಿ ನನ್ನ ಕುಟುಂಬಕ್ಕೆ ಸಿಕ್ಕಷ್ಟು ಪ್ರಚಾರ ಯಾರಿಗೂ ಸಿಗಲಿಲ್ಲ. ಜೆಡಿಎಸ್ ನಮ್ಮ ಕುಟುಂಬದವರನ್ನು ಬಿಟ್ಟು ಬೇರೆ ಯಾರು ಬೇಕಾದರೂ ಅಧ್ಯಕ್ಷರಾಗಲಿ ಎಂದು ಹೇಳಿದ್ದೇನೆ. ಆದರೆ ಯಾರು ಸಿದ್ಧರಿಲ್ಲ. ನಾನು ಏನೂ ಮಾಡಲಿ. ಜೆಡಿಎಸ್ ಅನ್ನು ಸಿಎಂ ಟಾರ್ಗೆಟ್ ಮಾಡಿದ್ದಾರೆ. ಕುಮಾರಸ್ವಾಮಿ, ಎಚ್.ಡಿ. ದೇವೇಗೌಡರನ್ನು ಯಾವ ರೀತಿ ಮುಗಿಸಬೇಕು. ಯಾವ ರೀತಿ ಇವರ ಚಾರಿತ್ರ್ಯ ಹರಣ ಮಾಡಬೇಕು ಎಂದು ಸಿಎಂ ಬಹಳ ಪ್ರಯತ್ನ ಮಾಡುತ್ತಿದ್ದಾರೆ. ಕುಟುಂಬದ ಒಳಗೆ ನಡೆದ ಒಂದು ಪ್ರಕರಣ ವಿಚಾರದಲ್ಲಿ ಎಚ್.ಡಿ. ದೇವೇಗೌಡರನ್ನು ಮಾನಸಿಕವಾಗಿ ಕುಗ್ಗಿಸುವ ಬಹಳ ಪ್ರಯತ್ನ ಆಗಿದೆ. ದೇವೇಗೌಡರ ಗರಡಿಯಲ್ಲೆ ಬೆಳೆದ ಸಿದ್ದರಾಮಯ್ಯ ಈಗ ದೇವೇಗೌಡ ಕುಟುಂಬಕ್ಕೆ ಕೊಡುತ್ತಿರುವ ಕೊಡುಗೆ ಒಂದಾ ಎರಡಾ? ವೀರಪ್ಪನ್ ಪ್ರಕರಣದಲ್ಲಿ ಪೊಲೀಸರಿಗೆ ಬಹುಮಾನ ರೂಪದಲ್ಲಿ ಹಣ ನೀಡಲಾಗಿತ್ತು. ಅದು ಬಿಟ್ಟರೆ ಹಾಸನದ ಕೇಸ್ ವಿಚಾರದಲ್ಲೇ ಸರಕಾರ ಪೊಲೀಸರಿಗೆ 30 ಲಕ್ಷ ರೂ ಬಹುಮಾನವಾಗಿ ಕೊಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

10 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

11 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

12 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

13 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

16 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

16 hours ago