ಮೈಸೂರು ನಗರ

ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ: ಕಮಲ್‌ ಹಾಸನ್‌ ಹೇಳಿಕೆಗೆ ಸಿ.ಟಿ.ರವಿ ಟಾಂಗ್‌

ಮೈಸೂರು: ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ಕಮಲ್‌ ಹಾಸನ್‌ ವಿರುದ್ಧ ಕಿಡಿಕಾರಿದ್ದಾರೆ.

ಕನ್ನಡದ ಬಗ್ಗೆ ಕಮಲ್‌ ಹಾಸನ್‌ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಮಲ್ ಹಾಸನ್ ಹೇಳಿದ ತಕ್ಷಣ ಅಪ್ಪ ಮಗ ಆಗಲ್ಲ, ಮಗ ಅಪ್ಪ ಆಗಲ್ಲ. ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ.

ಕೆಲವರು ವಿಷಯಾಂತರ ಮಾಡಿ ಇದನ್ನು ರಾಜಕೀಯವಾಗಿ ಮುನ್ನೆಲೆಗೆ ಬಿಡುತ್ತಿದ್ದು, ಪಹಲ್ಗಾಮ್‌ ವಿಚಾರ, ಆಪರೇಷನ್‌ ಸಿಂಧೂರ ಚರ್ಚೆ ಆಗಬಾರದು ಎಂದು ಪ್ಲಾನ್‌ ಮಾಡುತ್ತಿದ್ದಾರೆ. ಕನ್ನಡ, ತಮಿಳು ಅಕ್ಕ ತಂಗಿಯರು. ಕಮಲ್ ಹಾಸನ್ ನೀವು ನಟ, ರಾಜಕಾರಣಿ. ಆದ್ರೆ ಭಾಷಾ ತಜ್ಞ ಅಲ್ಲ. ಹಾಗಾಗಿ ಕನ್ನಡದ ಬಗ್ಗೆ ತಿಳಿದು ಮಾತನಾಡಿ ಎಂದು ಟಾಂಗ್‌ ಕೊಟ್ಟರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

9 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

10 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

11 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

13 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

13 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

17 hours ago