ಮೈಸೂರು ನಗರ

ಮೈಸೂರಲ್ಲಿ ಮರಗಳ ಹನನ ; ನಾಳೆ ಮೊಂಬತ್ತಿ ಹಚ್ಚಿ ಮೌನ ಪ್ರತಿಭಟನೆ

ಮೈಸೂರು: ನಗರದ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಕಚೇರಿ ಬಳಿಯ ರಸ್ತೆಯಲ್ಲಿನ ಮರಗಳನ್ನು ರಾತ್ರೋರಾತ್ರಿ ಕಡಿದಿರುವ ಘಟನೆಯನ್ನು ಖಂಡಿಸಿ ಏ.18ರಂದು ಸಂಜೆ 6.30ಕ್ಕೆ ಮರಗಳು ಕಡಿಯಲ್ಪಟ್ಟ ಜಾಗದಲ್ಲೇ ಕಪ್ಪುಪಟ್ಟಿ ಧರಿಸಿ, ಮೊಂಬತ್ತಿ ಹಚ್ಚಿ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಪರಿಸರ ಉಳಿವಿಗಾಗಿ ಕ್ರಿಯಾ ಸಮಿತಿ ಸಂಸ್ಥಾಪಕ ಸದಸ್ಯ ಪರಶುರಾಮೇಗೌಡ ತಿಳಿಸಿದರು.

ಬುಧವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತಿಕ ತಾಪಮಾನ ದಿನೇ ದಿನೇ ಏರುತ್ತಿದ್ದು, ಇದರ ಭೀಕರ ಪರಿಣಾಮಗಳನ್ನು ಜಗತ್ತಿನಾದ್ಯಂತ ಕಾಣಲಾಗುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ಮರಗಳ ಮಾರಣ ಹೋಮ ನಡೆಯುತ್ತಿದೆ. ಅಕ್ರಮ ಗಣಿಗಾರಿಕೆಯಿಂದ ಬೆಟ್ಟ-ಗುಡ್ಡಗಳು ಕರಗುತ್ತಿದ್ದು, ಅಂತರ್ಜಲ ಪಾತಾಳ ಸೇರು ತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕಳೆದ ವರ್ಷ ಮೈಸೂರಿನ ತಾಪಮಾನ 40 ಡಿಗ್ರಿ ಸೆಂಟಿಗ್ರೇಡ್ ದಾಟಿತ್ತು. ಈ ವರ್ಷ ಫೆಬ್ರವರಿ ತಿಂಗಳಲ್ಲೇ ರಾಜ್ಯದ ಕೆಲವು ಕಡೆಗಳಲ್ಲಿ 42 ಡಿಗ್ರಿ ಸೆಂಟಿಗ್ರೇಡ್ ಉಷ್ಣಾಂಶ ದಾಖಲಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಗಿಡಗಳನ್ನು ನೆಟ್ಟು ಬೆಳೆಸಬೇಕಾದ ಅರಣ್ಯ ಇಲಾಖೆ ಸುಮಾರು 40 ದೊಡ್ಡ ಮರಗಳನ್ನು ಕಡಿಯಲು ಅನುಮತಿ ನೀಡಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇನ್ನು ಎಸ್‌ಪಿ ಕಚೇರಿ ಬಳಿ ರಸ್ತೆ ಅಗಲೀಕರಣದ ಅಗತ್ಯವೇ ಇರಲಿಲ್ಲ. ಆದರೂ ರಸ್ತೆ ಅಗಲೀಕರಣದ ಹೆಸರಿನಲ್ಲಿ ಅಮಾನುಷವಾಗಿ 40 ಮರಗಳನ್ನು ಕಡಿಯಲಾಗಿದೆ. ಅದೂ ಪರಿಸರ ವಾದಿಗಳು ಪ್ರತಿಭಟನೆ ನಡೆಸುವರು ಎಂಬ ಭಯದಿಂದ ಸಾರ್ವಜನಿಕವಾಗಿ ಗೋಚರವಾಗದಂತೆ ರಾತ್ರೋರಾತ್ರಿ ಮರಗಳ ಹನನ ಮಾಡಲಾಗಿದೆ ಎಂದು ದೂರಿದರು.

ಹೆಚ್ಚಿನ ಮಾಹಿತಿ:- ಮೈಸೂರು। ಮರಗಳ ಮಾರಣಹೋಮ ಖಂಡಿಸಿ ಪುಟಾಣಿಗಳಿಂದ ಪ್ರತಿಭಟನೆ

ಮರಗಳ ಅಮಾನುಷ ಹನನ ಕೃತ್ಯ ಖಂಡಿಸಿ ಏ.18ರಂದು ಮರಗಳನ್ನು ಕಡಿದ ಸ್ಥಳದಲ್ಲೇ ಪ್ರತಿಭಟನೆ ಹಮ್ಮಿಕೊಂಡು ಮರಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ. ನಾಗರಿಕರು, ಪರಿಸರ ಪ್ರೇಮಿ ಗಳು, ವಿದ್ಯಾರ್ಥಿಗಳು, ಯುವಜನತೆ, ಮಹಿಳೆಯರು ಮೊದಲಾದವರು ಈ ನಮ್ಮ ಸಾತ್ವಿಕ ಪ್ರತಿಭಟನೆ, ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗದವರು ಅಂದು ತಮ್ಮ ತಮ್ಮ ಮನೆಯಲ್ಲೇ ಕಪ್ಪು ಬಟ್ಟೆ ಧರಿಸಿ ಮೊಂಬತ್ತಿ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಬಹುದು. ನಂತರ ವಾಟ್ಸಾಪ್ ಮೂಲಕ ನಮಗೆ ಪರಿಸರ ಸಂರಕ್ಷಣೆ ಜಾಗೃತಿಗಾಗಿ, ಪ್ರಚಾರಕ್ಕಾಗಿ ಕಳುಹಿಸಬಹುದು ಎಂದು ತಿಳಿಸಿದರು.

ಸಂಪರ್ಕಕ್ಕೆ ಶೈಲಜೇಶ್-ಮೊ.ಸಂ.: 9886085361, ಭಾಗ್ಯ ಶಂಕರ್ 8867481635, ಪ್ರಭಾ ನಂದೀಶ್ 9731992852 ಅವರಿಗೆ ಕರೆ ಮಾಡಬಹುದಾಗಿದೆ ಎಂದರು. ಪರಿಸರ ಉಳಿವಿಗಾಗಿ ಕ್ರಿಯಾ ಸಮಿತಿಯ ಸದಸ್ಯ ಪಿಯುಸಿಲ್ ಕಮಲ್ ಗೋಪಿನಾಥ್, ಕುಸುಮಾ ಆಯರಹಳ್ಳಿ, ವಕೀಲರಾದ ಗೋಕುಲ್, ವೆಂಕಟಯ್ಯ ಮೊದಲಾದವರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago