ಮೈಸೂರು: ನಗರದ ನಜರ್‌ಬಾದ್‌ನಲ್ಲಿ ರಸ್ತೆಯ ಇಕ್ಕೆಲಗಳಲ್ಲಿದ್ದ ಸುಮಾರು 40 ಮರಗಳನ್ನು ಕಡಿದು ಉರುಳಿಸಿದ ಪ್ರಕರಣ ಮಾಸುವ ಮುನ್ನವೇ ಇದೀಗ ಮೈಸೂರಿನ ಉತ್ತನಹಳ್ಳಿಯ ತ್ರಿಪುರ ಸುಂದರಿ ಜ್ವಾಲಾಮುಖಿ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಮರಗಳ ಕಟಾವಿಗೆ ಸಿದ್ಧತೆ ನಡೆದಿದೆ.
ರಸ್ತೆ ಅಗಲೀಕರಣವಾಗುತ್ತಿರುವ ಹಿನ್ನೆಲೆಯಲ್ಲಿ 25 ಮರಗಳನ್ನ ಕಡಿದು ಹಾಕಲು ಸಿದ್ಧತೆ ನಡೆದಿದ್ದು, ಕಟಾವು ಮಾಡಬೇಕಿರುವ ಮರಗಳನ್ನು ಈಗಾಲೇ ಗುರುತು ಮಾಡಲಾಗಿದೆ.
ಬೃಹತ್ ಮರಗಳನ್ನ ಕತ್ತರಿಸಲು ಸಿದ್ಧತೆ ನಡೆದಿರುವ ಹಿನ್ನೆಲೆಯಲ್ಲಿ ಪರಿಸರ ಪ್ರೇಮಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ಮರಗಳನ್ನು ಕಡಿಯಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆ ಅಗಲೀಕರಣಕ್ಕಾಗಿ ಪಕ್ಕದಲ್ಲೇ ಇರುವ ಬೃಹದಾಕಾರದ ಹೊಂಗೆ, ಅರಳಿ, ಆಲದಮರಗಳ ಮೇಲೆ ನಮೂದು ಮಾಡಲಾಗಿದ್ದು, ರೈತ ಸಂಘಟನೆಗಳು ಪಾಲಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿವೆ.
ಈ ಬಗ್ಗೆ ಮಾತನಾಡಿರುವ ರೈತ ಮುಖಂಡರು, ಯಾವುದೇ ಕಾರಣಕ್ಕೂ ಇಲ್ಲಿನ ಮರಗಳನ್ನು ಕಡಿಯಲು ಬಿಡಲ್ಲ. ಒಂದು ವೇಳೆ ಮರ ಕಡಿಯಲು ಮುಂದಾದರೆ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ಒಟ್ಟಾರೆಯಾಗಿ ರೈತರು ಹಾಗೂ ವಿವಿಧ ಸಂಘಟನೆಗಳು ಒಂದೆಡೆ ಮರಗಳ ಉಳಿವಿಗಾಗಿ ನಗರದ ರಸ್ತೆಗಳಲ್ಲಿ ಗಿಡಗಳನ್ನು ನೆಡುತ್ತಿದ್ದಾರೆ. ಇತ್ತ ಬೆಳೆದು ನಿಂತಿರುವ ಬೃಹತ್ ಗಾತ್ರದ ಮರಗಳಿಗೆ ಅಧಿಕಾರಿಗಳು ಕೊಡಲಿ ಇಡಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಹಾಗೂ ಪರಿಸರ ಪ್ರೇಮಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆಯ ಹಾದಿ ಹಿಡಿಯಲಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…