Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ದರ್ಶನ್‌ ಬೇಲ್‌ ಬಗ್ಗೆ ನಟ ಶ್ರೀಮುರುಳಿ ಪ್ರತಿಕ್ರಿಯೆ

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್‌ ಬೇಲ್‌ ಬಗ್ಗೆ ನಟ ಶ್ರೀಮುರುಳಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು(ಡಿಸೆಂಬರ್‌.17) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಟ್ಟದ್ದು ಬರೋದೇ ಒಳ್ಳೆಯ ದಾರಿಗೆ ಕರೆದುಕೊಂಡು ಹೋಗಿ, ಒಳ್ಳೆಯ ದಿನಗಳನ್ನು ತೋರಿಸೋಕೆ. ನಾನು ಇದನ್ನು ಮುಂಚೆಯೂ ಹೇಳಿದ್ದೇ ಈಗಲೂ ಹೇಳುತ್ತಿದ್ದೇನೆ. ಕಾಲಾಯ ತಸ್ಮೈ ನಮಃ ಎಲ್ಲವನ್ನೂ ದೇವರು ನೋಡಿಕೊಳ್ಳುತ್ತಾನೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ದರ್ಶನ್‌ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ದರ್ಶನ್‌ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಅವರು ಚಿಕಿತ್ಸೆ ಪೂರ್ಣಗೊಳಿಸಿಕೊಂಡು ಮನೆಗೆ ಬರಲಿ. ಆ ನಂತರ ಅವರನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇಂದೇ ನಟ ಶ್ರೀ ಮುರುಳಿ ಅವರು ತಮ್ಮ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದರು.

Tags: