ಮೈಸೂರು: ನಾಡ ದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.
ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹೋಗಿ ಬಂದ ನಟ ದರ್ಶನ್ ಅವರು, ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ಎಲ್ಲರಿಗೂ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ನೆಚ್ಚಿನ ನಟನನ್ನು ಕಂಡು ಅಭಿಮಾನಿಗಳು ದರ್ಶನ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಂದಾದರು. ಈ ವೇಳೆ ನಗುತ್ತಲೇ ಎಲ್ಲರತ್ತ ಕೈಬೀಸಿದ ದರ್ಶನ್, ಕೆಲ ಅಭಿಮಾನಿಗಳ ಜೊತೆ ಫೋಟೋಗೆ ಫೋಸ್ ನೀಡಿ ತೆರಳಿದರು.





