ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ದಲಿತ ಸಂಘರ್ಷ ಸಮಿತಿ ಮುಖಂಡರು ಇಂದು ಸಚಿವ ಎಚ್.ಸಿ.ಮಹದೇವಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸುವಂತೆ ಸರ್ಕಾರಕ್ಕೆ ದಸಂಸ ಹಲವಾರು ಬಾರಿ ಮನವಿ ಮಾಡಿದೆ. ಆದರೂ ನಿರ್ಲಕ್ಷ್ಯ ತೋರಿರುವ ರಾಜ್ಯ ಸರ್ಕಾರ ಕಾಮಗಾರಿಯನ್ನು ಮುಗಿಸದೇ ಬೇಜಾವಾಬ್ದಾರಿ ಪ್ರದರ್ಶನ ಮಾಡುತ್ತಿದೆ.
ಇದರಿಂದ ಆಕ್ರೋಶಗೊಂಡು ರೊಚ್ಚಿಗೆದ್ದ ದಲಿತ ಸಂಘರ್ಷ ಸಮಿತಿ ಮುಖಂಡರು ಇಂದು ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸಚಿವ ಎಚ್.ಸಿ.ಮಹದೇವಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು, ಸುಮಾರು 50ಕ್ಕೂ ಹೆಚ್ಚು ಮಂದಿ ದಸಂಸ ಕಾರ್ಯಕರ್ತರನ್ನು ಬಂಧಿಸಿದರು. ದಸಂಸ ಮುಖಂಡ ಚೋರನಹಳ್ಳಿ ಶಿವಣ್ಣ, ಬೆಟ್ಟಯ್ಯ ಕೋಟೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…