Mysore
21
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಅಕ್ಟೋಬರ್.‌3ರಂದು ದಸರಾ ಚಲನಚಿತ್ರೋತ್ಸವ ಉದ್ಘಾಟನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಮೈಸೂರಿನಲ್ಲಿ ಸರ್ವ ರೀತಿಯಲ್ಲೂ ಸಿದ್ಧತೆ ನಡೆಸಲಾಗುತ್ತಿದೆ.

ದಸರಾ ಚಲನಚಿತ್ರ ಉಪಸಮಿತಿಯಿಂದ ಚಲನಚಿತ್ರೋತ್ಸವನ್ನು ಆಯೋಜನೆ ಮಾಡಲಾಗುತ್ತಿದ್ದು, ಅಕ್ಟೋಬರ್.‌3ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ.

ಅಂದು ನಡೆಯುವ ಉದ್ಘಾಟನೆ ಕಾರ್ಯಕ್ರಮದಲ್ಲಿ ಖ್ಯಾತ ನಾಯಕ ನಟರಾದ ರಮೇಶ್‌ ಅರವಿಂದ್‌, ಡಾಲಿ ಧನಂಜಯ್‌, ಸಪ್ತಮಿಗೌಡ, ಶರಣ್ಯ ಶೆಟ್ಟಿ, ಅಕ್ಷಿತ ಬೋಪಯ್ಯ ಭಾಗಿಯಾಗಿ ಮೆರುಗು ಹೆಚ್ಚಿಸಲಿದ್ದಾರೆ.

ಅಂದು ಬೆಳಿಗ್ಗೆ ಸಾಧುಕೋಕಿಲಾ ಹಾಗೂ ತಂಡದವರಿಗೆ ಸಂಗೀತ ಹಾಗೂ ಮನರಂಜನೆ ಕಾರ್ಯಕ್ರಮ ನಡೆಯಲಿದೆ.

ಕನ್ನಡದ ಪ್ರಖ್ಯಾತ ನಟ ದಿವಂಗತ ದ್ವಾರಕೀಶ್‌ ಅವರ ಸವಿನೆನಪಿನಲ್ಲಿ ಈ ಬಾರಿಯ ಚಲನಚಿತ್ರೋತ್ಸವನ್ನು ಹಮ್ಮಿಕೊಳ್ಳಲಾಗಿದ್ದು, ಅವರ ಅಭಿನಯದ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ.

Tags:
error: Content is protected !!