ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮ ದಿನದಿಂದ ದಿನಕ್ಕೆ ರಂಗೇರುತ್ತಿದೆ.
ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ಅರಮನೆ ಮಂಡಳಿಯಲ್ಲಿ ದಸರಾ ಫಲ ಪುಷ್ಪ ಪ್ರದರ್ಶನದ ಪೋಸ್ಟರ್ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಸೇರಿದಂತೆ ಮುಂತಾದವರು ಹಾಜರಿದ್ದರು.