Mysore
20
light rain

Social Media

ಸೋಮವಾರ, 14 ಅಕ್ಟೋಬರ್ 2024
Light
Dark

ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗರಿಗೆ ಪಾದರಕ್ಷೆ ವಿತರಣೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಯ ಮಾವುತರು ಹಾಗೂ ಕಾವಾಡಿಗರಿಗೆ ಪಾದರಕ್ಷೆಗಳನ್ನು ವಿತರಣೆ ಮಾಡಲಾಯಿತು.

ಅರಮನೆ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಗಜಪಡೆಯ ಮಾವುತರು ಹಾಗೂ ಕಾವಾಡಿಗರಿಗೆ ಪಾದರಕ್ಷೆಗಳನ್ನು ವಿತರಣೆ ಮಾಡಿದರು.

ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ(ಲಿಡ್ಕರ್) ವತಿಯಿಂದ ಸಿದ್ಧಪಡಿಸಿದ ಪಾದರಕ್ಷೆಗಳನ್ನು ವಿತರಣೆ ಮಾಡಿದ ಖುಷಿಪಟ್ಟರು.

ಈ ವೇಳೆ ನಟ ಡಾಲಿ ಧನಂಜಯ್, ವಿಧಾನಪರಿಷತ್‌ ಸದಸ್ಯ ಡಾ.ಡಿ..ತಿಮ್ಮಯ್ಯ, ಲಿಡ್ಕರ್‌ ವ್ಯವಸ್ಥಾಪಕ ನಿರ್ದೇಶಕಿ ವಸುಂದರ ಸೇರಿದಂತೆ ಹಲವರು ಭಾಗಿಯಾಗಿದ್ದರು.

Tags: