Mysore
27
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

ಪ್ರಜಾಪ್ರಭುತ್ವ ಮಾನವ ಸರಪಳಿ ಕಾರ್ಯಕ್ರಮಕ್ಕೆ ದಸರಾ ಗಜಪಡೆ ಸಾಥ್‌

ಮೈಸೂರು: ದೇಶದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲು ಇಂದು ಪ್ರಜಾಪ್ರಭುತ್ವ ಮಾನವ ಸರಪಳಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಅರಮನೆಯ ಉತ್ತರ ದ್ವಾರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಮಾರು 60 ಸಾವಿರ ಜನರು ಭಾಗಿಯಾಗಿದ್ದರು.

ಸುಮಾರು 60 ಸಾವಿರ ಜನರು ಭಾಗಿಯಾಗಿದ್ದ ಮಾನವ ಸರಪಳಿ ಕಾರ್ಯಕ್ರಮಕ್ಕೆ ದಸರಾ ಗಜಪಡೆ ಸಾಥ್‌ ನೀಡಿದವು. ಕ್ಯಾಪ್ಟನ್‌ ಅಭಿಮನ್ಯು ನೇತ್ವತ್ವದ ದಸರಾ ಗಜಪಡೆಯು ಮಾನವ ಸರಪಳಿ ಕಾರ್ಯಕ್ರಮಕ್ಕೆ ಬಂದು ಯಶಸ್ವಿಗೊಳಿಸಿದವು.

ಈ ವೇಳೆ ದಸರಾ ಗಜಪಡೆಯನ್ನು ನೋಡಿ ಜನತೆ ಖುಷಿಪಟ್ಟು, ಫೋಟೋ ಕ್ಲಿಕ್ಕಿಸಿಕೊಂಡರು.

Tags:
error: Content is protected !!