ಮೈಸೂರು ನಗರ

ತ್ರಿವರ್ಣ ಧ್ವಜ ಹಿಡಿದು ಸ್ವಚ್ಛತೆ ಸಂದೇಶ ಸಾರಿದ ದಸರಾ ಗಜಪಡೆ

ಮೈಸೂರು: ದಸರಾ ಗಜಪಡೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಆನೆಗಳು, ಸೊಂಡಿಲಿನ ಮೂಲಕ ತ್ರಿವರ್ಣ ಧ್ವಜ ಹಿಡಿದು, ನಗರವನ್ನು ಸ್ವಚ್ಛತೆಯಾಗಿ ಇಡುವಂತೆ ಸಂದೇಶ ಸಾರಿದವು.

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಮನೆ ಮನೆಯಲ್ಲೂ ತ್ರಿವರ್ಣ, ಮನೆ ಮನೆಯಲ್ಲೂ ಸ್ವಚ್ಛತೆ ಕಾರ್ಯಕ್ರಮ ಅಂಗವಾಗಿ ದಸರಾ ಗಜಪಡೆ ಕ್ಯಾಪ್ಟನ್ ಅಭಿಮನ್ಯು, ಪ್ರಶಾಂತ, ಏಕಲವ್ಯ, ಧನಂಜಯ, ಕಂಜನ್, ಕಾವೇರಿ, ಲಕ್ಷ್ಮಿ, ಮಹೇಂದ್ರ, ಭೀಮ ಆನೆಗಳು ಸೊಂಡಿಲಿನ ಮೂಲಕ ತ್ರಿವರ್ಣ ಧ್ವಜ ಹಿಡಿದು ಸಾಗಿದವು.

ನಂತರ ಆನೆಗಳ ಮೇಲೆ ಕುಳಿತ ಮಾವುತರು, ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಿಂದ ಆನೆಗಳ ಮೇಲೆ ಧ್ವಜ ಹಿಡಿದು, ಕೆ.ಆರ್.ಆಸ್ಪತ್ರೆ ವೃತ್ತದವರೆಗೆ ಸಾಗಿ, ವಾಪಸ್ ಅರಮನೆಗೆ ಪ್ರವೇಶ ಮಾಡಿದರು.

ಕಾರ್ಯಕ್ರಮದಲ್ಲಿ ನಗರ ಪಾಲಿಕೆ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರೂ ಕೂಡ ತ್ರಿವರ್ಣ ಧ್ವಜ ಹಿಡಿದು‌ ಸಾಗಿದರು.

ನಗರ ಪಾಲಿಕೆ ಸಿಬ್ಬಂದಿ ಮನೆ ಮನೆಯಲ್ಲೂ ತ್ರಿವರ್ಣ, ಮನೆ ಮನೆಯಲ್ಲೂ ಸ್ವಚ್ಛತೆ ಎಂದು ಘೋಷಣೆ ಕೂಗುತ್ತ, ನಗರವನ್ನು ಸ್ವಚ್ಛವಾಗಿ ಇಡಲು ಸಾರ್ವಜನಿಕರು ಕೈ ಜೋಡಿಸಿ ಎಂದು ಮನವಿ ಮಾಡಿದರು.

ಈ ವೇಳೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಗರ ಪಾಲಿಕೆ ಆಯುಕ್ತ ತನ್ವೀರ್ ಶೇಕ್ ಆಸೀಫ್ ಅವರು, ಮೈಸೂರು ನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ನಗರವನ್ನು ಸ್ವಚ್ಛವಾಗಿಡಲು ಕೈ ಜೋಡಿಸಬೇಕು. ಮುಂದಿನ ಬಾರಿ ಮೈಸೂರು ಸ್ವಚ್ಛತೆಯಲ್ಲಿ ನಂಬರ್ ಒನ್ ಸ್ಥಾನಗಳಿಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಇನ್ನು ಮಳೆಯಿಂದ ಗುಂಡಿ ಬಿದ್ದಿರುವ ರಸ್ತೆಗಳನ್ನು ದಸರಾದೊಳಗೆ ದುರಸ್ತಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

55 mins ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

57 mins ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

59 mins ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

1 hour ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

1 hour ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

1 hour ago