ಮೈಸೂರು ನಗರ

ದಸರಾ ವೇದಿಕೆಯಲ್ಲಿ ರಾಜಕೀಯ ತಂದಿದ್ದಾರೆ: ಜಿಟಿಡಿ ವಿರುದ್ಧ ಶಾಸಕ ಶ್ರೀವತ್ಸ ಕಿಡಿ

ಮೈಸೂರು: ದಸರಾ ವೇದಿಕೆಯಲ್ಲಿ ಶಾಸಕ ಜಿ.ಟಿ.ದೇವೇಗೌಡ ಸಿಎಂ ಪರ ಮಾತನಾಡುವ ಮೂಲಕ ರಾಜಕೀಯ ತಂದಿದ್ದಾರೆ ಎಂದು ಶಾಸಕ ಶ್ರೀವತ್ಸ ಕಿಡಿಕಾರಿದ್ದಾರೆ.

ನಿನ್ನೆ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಆದ ಬಳಿಕ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪರ ಎಫ್‌ಐಆರ್‌ ದಾಖಲಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ ಎಂದು ಬ್ಯಾಟ್‌ ಮಾಡಿದ್ದರು.

ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು, ದಸರಾ ವೇದಿಕೆಯಲ್ಲಿ ರಾಜಕೀಯ ತಂದಿದ್ದಾರೆ. ಜಿ.ಟಿ.ದೇವೇಗೌಡ ಹಿರಿಯರಿದ್ದಾರೆ. ಯಾಕೆ ಆ ರೀತಿ ಮಾತನಾಡಿದ್ದಾರೋ ಗೊತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇನ್ನು ಮುಡಾ ಹಗರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾದಲ್ಲಿ ಬರೀ 14 ಸೈಟ್‌ ಅಲ್ಲ, 4500 ಸೈಟ್‌ ಅಕ್ರಮವಾಗಿದೆ. ಸಿಎಂ ಸಿದ್ದರಾಮಯ್ಯರನ್ನು ಮುಂದಿಟ್ಟುಕೊಂಡು ಎಲ್ಲರೂ ರಕ್ಷಣೆ ಪಡೆಯುತ್ತಿದ್ದಾರೆ. ಮುಡಾ ಅಧಿಕಾರಿಗಳನ್ನು ರಕ್ಷಿಸುವ ಕೆಲಸ ಆಗುತ್ತಿದೆ. ಎಲ್ಲಾ ವಿಚಾರದಲ್ಲೂ ಸರ್ಕಾರ ತಪ್ಪು ಮಾಡಿದೆ. ಈ ಹಿನ್ನೆಲೆಯಲ್ಲಿ ಎಲ್ಲದರ ಬಗ್ಗೆಯೂ ತನಿಖೆ ಆದರೆ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು ಆಗ್ರಹಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

38 mins ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

41 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

45 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

48 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

58 mins ago