ಮೈಸೂರು ನಗರ

ದಸರಾ ಸಾಂಸ್ಕೃತಿಕವಾಗಿ ಮಾಡುವ ನಾಡಹಬ್ಬ: ಸಿಎಂ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸಾಂಸ್ಕೃತಿಕವಾಗಿ ಮಾಡಲಾಗುತ್ತಿದ್ದು, ಅದನ್ನು ಇಂಥವರೇ ಉದ್ಘಾಟನೆ ಮಾಡಬೇಕು ಅಂತೇನಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಪವರ್ ಕಮಿಟಿಯಲ್ಲಿ ನಾವು ತೀರ್ಮಾನ ಮಾಡಿದ್ದೇವೆ. ಬಾನು ಮುಷ್ತಾಕ್‌ ಬೂಕರ್ ಪ್ರಶಸ್ತಿ ವಿಜೇತೆಯಾಗಿದ್ದಾರೆ. ನಾಡಹಬ್ಬವನ್ನು ಇಂಥವರೇ ಉದ್ಘಾಟನೆ ಮಾಡಬೇಕು ಅಂತ ಇಲ್ಲ. ಇದು ಎಲ್ಲರ ಎಲ್ಲರ ಹಬ್ಬ. ಮಹಾರಾಜರ ಕಾಲದಿಂದಲೂ ಹಬ್ಬ ಆಗ್ತಿದೆ ಹೈದರಾಲಿ, ಟಿಪ್ಪು ಕಾಲದಲ್ಲೂ ದಸರಾ ಆಗಿದೆ. ವಿರೋಧ ಮಾಡುತ್ತಿರುವವರಿಗೆ ಇತಿಹಾಸ ಗೊತ್ತಿಲ್ಲ. ಬಿಜೆಪಿಯವರು ಜ್ಯಾತ್ಯಾತೀತವಾಗಿ ಮಾತನಾಡಲ್ಲ ಎಂದು ವಾಗ್ದಾಳಿ ನಡೆಸಿದರು.

ಇನ್ನು ಕನ್ನಡತಾಯಿ ಬಗ್ಗೆ ಬಾನು ಮುಷ್ತಾಕ್‌ ಹೇಳಿಕೆ ವೈರಲ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರಿಗೆ ಕನ್ನಡದ ಬಗ್ಗೆ ಪ್ರೀತಿ ಇದೆ. ಅದಕ್ಕಾಗಿಯೇ ಪುಸ್ತಕಗಳನ್ನು ಬರೆದಿದ್ದಾರೆ. ಬಿಜೆಪಿ ಏನೋ ಕುಂಟು ನೆಪ ಹುಡುಕುತ್ತಿದೆ ಅಷ್ಟೇ. ನಾಡಹಬ್ಬ ಉದ್ಘಾಟನೆ ಎಲ್ಲರ ಹಬ್ಬ ಅಷ್ಟೇ ಎಂದರು.

ಇನ್ನು ಬಾನು ಮುಷ್ತಾಕ್‌ ದನ ತಿಂದು ಉದ್ಘಾಟನೆಗೆ ಬರುತ್ತಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಾನು ಮುಷ್ತಾಕ್‌ ಅವಾರು ದನ ತಿನ್ನೋದನ್ನ ಅಶೋಕ್‌ ನೋಡಿದ್ದಾರಾ? ಬಿಜೆಪಿಗರು ಡೋಂಗಿಗಳು ಅವರ ಮಾತುಗಳನ್ನು ಕೇಳಬಾರದು ಎಂದು ವಾಗ್ದಾಳಿ ನಡೆಸಿದರು.

ಇನ್ನು ಅರಮನೆ ಮುಂಭಾಗ ದೀಪಾ ಬಸ್ತಿಗೂ ಸನ್ಮಾನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗಾಗಲೇ ಇಬ್ಬರಿಗೂ ಸರ್ಕಾರದಿಂದ ಸನ್ಮಾನ ಮಾಡಿದ್ದೇವೆ. ದೀಪಾ ಬಸ್ತಿಗೂ ಕೂಡ ಸನ್ಮಾನ ಆಗುತ್ತೆ, ಮುಂದೆ ನೋಡೋಣ. ಆ ಬಗ್ಗೆಯೂ ಚರ್ಚೆ ಮಾಡ್ತೀನಿ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

1 hour ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

2 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

2 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

2 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

2 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

2 hours ago