Mysore
20
scattered clouds

Social Media

ಭಾನುವಾರ, 10 ನವೆಂಬರ್ 2024
Light
Dark

ಮೈಸೂರು ದಸರಾ ಮಹೋತ್ಸವದ ದೀಪಾಲಂಕಾರ ವಿಸ್ತರಣೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇನ್ನು 10 ರಿಂದ 12 ದಿನಗಳ ಕಾಲ ದೀಪಾಲಂಕಾರವನ್ನು ವಿಸ್ತರಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಈ ಬಗ್ಗೆ ಮೈಸೂರು ಅರಮನೆ ಆವರಣದಲ್ಲಿಂದು ಮಾತನಾಡಿದ ಅವರು, ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದೇಶ-ವಿದೇಶ ಹಾಗೂ ನೆರೆ ರಾಜ್ಯ ಮತ್ತು ಜಿಲ್ಲೆಗಳಿಂದ ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದಸರಾ ಪ್ರಯುಕ್ತ ಅಳವಡಿಸಲಾಗಿರುವ ದೀಪಾಲಂಕಾರವನ್ನು ಇನ್ನು 10 ರಿಂದ 12 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಈ ವರ್ಷ ಒಳ್ಳೆಯ ಮಳೆಯಾಗಿದೆ. ಜೊತೆಗೆ ಮೈಸೂರಿನಂತೆಯೇ ರಾಜ್ಯದ ಇನ್ನಿತರ ಭಾಗಗಳಲ್ಲಿ ದಸರಾ ಸಂಭ್ರಮವನ್ನು ಆಚರಣೆ ಮಾಡಲಾಗುತ್ತಿದೆ. ಮಡಿಕೇರಿಯಲ್ಲಿಯೂ ಮೈಸೂರಿನಷ್ಟೇ ವಿಜೃಂಭಣೆಯಾಗಿ ದಸರಾ ಜರುಗುತ್ತಿದೆ ಎಂದರು.

 

Tags: