ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಕಲ ಸಿದ್ಧತೆ ನಡೆಸಲಾಗುತ್ತಿದೆ.
ವಿಶ್ವವಿಖ್ಯಾತಿ ಪಡೆದಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮೈಸೂರಿನಲ್ಲಿ ಎಲ್ಲೆಡೆ ಸಿದ್ಧತೆ ನಡೆಯುತ್ತಿದ್ದು, ರಸ್ತೆ ದುರಸ್ತಿ, ವಿದ್ಯುತ್ ದೀಪ ಅಳವಡಿಕೆ, ರಸ್ತೆ ಬದಿ ಬಣ್ಣ ಬಳಿಯುವುದು ಸೇರಿದಂತೆ ಹಲವು ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ.
ಈಗಾಗಲೇ ಅನೇಕ ರಸ್ತೆಗಳಲ್ಲಿ ಗುಂಡಿ ಮುಚ್ಚುವ ಕೆಲಸ ಪೂರ್ಣಗೊಳಿಸಲಾಗಿದೆ. ಇದರ ಜೊತೆಗೆ ದಸರಾ ವೈಭವ ಮರುಕಳಿಸಲೆಂದೇ ನಗರಗಳಲ್ಲಿರುವ ರಾಜಮಹಾರಾಜರು ಹಾಗೂ ಪ್ರಮುಖರ ಪ್ರತಿಮೆಗಳನ್ನು ಸ್ವಚ್ಛಗೊಳಿಸಲಾಗಿದೆ.
ಇನ್ನು ಅಲ್ಲಲ್ಲಿ ಒಳಚರಂಡಿ ದುರಸ್ತಿಗೊಳಿಸಲಾಗುತ್ತಿದ್ದು, ಪ್ರಮುಖ ಕಟ್ಟಡಗಳಿಗೆ ಬಣ್ಣ ಬಳಿಯಲಾಗಿದೆ. ಇನ್ನೂ ಹಲವು ಕಡೆ ಬಣ್ಣ ಬಳಿಯುವ ಕಾರ್ಯ ಪ್ರಗತಿಯಲ್ಲಿದೆ.
ಇನ್ನು ಅರಮನೆಯ ದರ್ಬಾರ್ ಹಾಲ್ ಸೇರಿದಂತೆ ಅರಮನೆಗೆ ಸುತ್ತ ಮುತ್ತ ಬಣ್ಣ ಬಳಿಯಲಾಗಿದ್ದು, ವಿದ್ಯುತ್ ದೀಪಗಳನ್ನು ದುರಸ್ತಿ ಮಾಡಲಾಗುತ್ತಿದೆ. ಇನ್ನು 10 ದಿನದಲ್ಲಿ ಅರಮನೆ ಒಳಗೆ ದಸರಾ ಸಿದ್ಧತಾ ಕಾರ್ಯಗಳನ್ನು ಮುಗಿಸಲು ಅರಮನೆ ಮಂಡಳಿ ಕ್ರಮ ಕೈಗೊಂಡಿದೆ.
ಇನ್ನು ನಗರದ ಪ್ರಮುಖ ರಸ್ತೆಗಳಿಗೆ ದೀಪಾಲಂಕಾರ ಮಾಡಲಾಗುತ್ತಿದ್ದು, ದಸರಾ ವೈಭವ ನೋಡಲು ಜನತೆ ಕಾತುರದಿಂದ ಕಾಯುತ್ತಿದ್ದಾರೆ.
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…