ಮೈಸೂರು: ಕಳೆದ ಬಾರಿಯ ದಸರಾ ಟಿಕೆಟ್ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆಸಲಾಗಿದೆ ಎಂದು ವಾಯ್ಸ್ ಆಫ್ ಪೀಪಲ್ ಸಂಸ್ಥೆ ಮುಖ್ಯಸ್ಥ ವಸಂತ್ ರಾವ್ ಚೌವ್ಹಾಣ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಬಾರಿ 79,860 ದಸರಾ ಟಿಕೆಟ್‌ಗಳಲ್ಲಿ 25,703 ಟಿಕೆಟ್‌ಗಳನ್ನು ಸಾರ್ವಜನಿಕರಿಗೆ ಮೀಸಲು ಇಡಲಾಗಿತ್ತು.
ಆದರೆ ಸಾರ್ವಜನಿಕರಿಗೆ ಮಾರಾಟವಾದ ಟಿಕೆಟ್‌ಗಳು 4617 ಮಾತ್ರ. 54,157 ಟಿಕೆಟ್‌ಗಳು ರಾಜಕಾರಣಿಗಳು ಹಾಗೂ ಅಧಿಕಾರಿಗಳಿಗೆ ಮಾತ್ರ ಮೀಸಲಾಗಿದ್ದವು. ಸಾರ್ವಜನಿಕರಿಗೆ ಮೀಸಲಿಟ್ಟ ಟಿಕೆಟ್ ರಾಜಕೀಯ ಪುಡಾರಿಗಳ ಪಾಲಾಗಿತ್ತು ಎಂದು ಕಿಡಿಕಾರಿದರು.
ಇನ್ನು ಇದರಿಂದ ಸರ್ಕಾರಕ್ಕೆ 2,63,38,000 ರೂ ನಷ್ಟವಾಗಿದೆ. ನೆಪಮಾತ್ರಕ್ಕೆ ಸಾರ್ವಜನಿಕರಿಗೆ ಮೀಸಲು ಎಂದು ದುಪ್ಪಟ್ಟು ಬೆಲೆಗೆ ರಾಜಕೀಯ ಪುಡಾರಿಗಳಿಂದ ಬ್ಲಾಕ್‌ನಲ್ಲಿ ಟಿಕಟ್ ಮಾರಾಟ ಮಾಡಲಾಗುತ್ತದೆ.
ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಪಡೆದ ದಾಖಲೆಗಳಿಂದ ಈ ವಿಚಾರ ಬಯಲಿಗೆ ಬಂದಿದೆ. ಈ ಕುರಿತು ಈಗಾಗಲೇ ಲೋಕಾಯುಕ್ತ ಹಾಗೂ ರಾಜ್ಯಪಾಲರಿಗೆ ದೂರು ನೀಡಿದ್ದೇವೆ.
ನಾಡಹಬ್ಬ ದಸರಾ ಕೇವಲ ಅಧಿಕಾರಿಗಳು ಹಾಗೂ ರಾಜಕಾರಣಿಗಳ ದಸರಾ ಆಗುತ್ತಾ ಇದೆ. ದಯಮಾಡಿ ಈ ಬಾರಿ ಇಂತಹ ಅವ್ಯವಹಾರ ತಪ್ಪಿಸಿ ಜನತಾ ದಸರಾ ಮಾಡಿ ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಸುಜಯ್ ಕುಮಾರ್ ಸಿಂಗ್, ಕಾರ್ಯದರ್ಶಿ ರಾಕೇಶ್, ನಿರ್ದೇಶಕ ಪ್ರದೀಪ್ ಬಿಡ್ಡನ್, ಸದಸ್ಯರಾದ ಪ್ರಜ್ವಲ್ ಕೃಷ್ಣ, ಭರತ್ ಕುಮಾರ್, ಎಸ್.ಸಂತೋಷ್ ಪೈ, ವೇಣುಗೋಪಾಲ್ ಹಾಜರಿದ್ದರು.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…