ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ ಅಧಿಕೃತ ವೆಬ್‌ಸೈಟ್‌ನ್ನು ಲೋಕಾರ್ಪಣೆ ಮಾಡಲಾಯಿತು.
ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಶಿವರಾಜ್ ಎಸ್.ತಂಗಡಗಿ ಬಿಡುಗಡೆ ಮಾಡಿದರು. ಜಿಲ್ಲಾಡಳಿತದಿಂದ ಹೊರ ತಂದಿರುವ ಅಧಿಕೃತ ಜಾಲತಾಣದಲ್ಲಿ ಅಕ್ಟೋಬರ್ ೧೧ರಿಂದ ೨೧ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಕುರಿತಾಗಿ ಮಾಹಿತಿ ಹೊಂದಿರುತ್ತದೆ. ಮೈಸೂರು ದಸರಾ ಮಹೋತ್ಸವದ ದಸರಾ ಉಪ ಸಮಿತಿಗಳ ಉಪ ವಿಶೇಷಾಧಿಕಾರಿಗಳು, ಕಾರ್ಯಾಧ್ಯಕ್ಷರು, ಕಾರ್ಯದರ್ಶಿಗಳು, ಸಮನ್ವಯಾಧಿಕಾರಿಗಳ ವಿವರಗಳನ್ನು ಹಾಕಲಾಗಿದೆ.
ಆ.೨೮ರಂದು ವೀರನಹೊಸಹಳ್ಳಿಯಿಂದ ಹೊರಟ ಗಜಪಯಣ, ಮೈಸೂರು ಅರಮನೆಗೆ ಸ್ವಾಗತ ಕೋರಿದ ಫೋಟೋಗಳು ಇವೆ. ಅರಮನೆ ಸೇರಿದಂತೆ ಎಂಟು ಕಡೆಗಳಲ್ಲಿ ನಡೆಯುವ ಕಾರ್ಯಕ್ರಮಗಳ ಸ್ಥಳಗಳನ್ನು ನೀಡಲಾಗಿದ್ದು, ಮುಂದೆ ಯಾವ್ಯಾವ ಕಾರ್ಯಕ್ರಮಗಳು ಇರುತ್ತವೆ ಎಂಬ ಮಾಹಿತಿಯನ್ನು ಹೊಂದಿದೆ. ಯುವ ದಸರಾ, ಫಲಫುಷ್ಪ ಪ್ರದರ್ಶನ, ಆಹಾರ ಮೇಳವಲ್ಲದೆ ಇನ್ನಿತರ ವಿಚಾರಗಳು ಇವೆ. ಗೋಲ್ಡ್ ಕಾರ್ಡ್, ಟಿಕೆಟ್ ಮಾರಾಟದ ದಿನಾಂಕವನ್ನು ಪ್ರಕಟಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಮಂಜುಶ್ರೀ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ರಮೇಶ್ ಬಾಬು ಬಂಡಿಸಿದ್ದೇಗೌಡ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಅನಂತು, ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಡಿಸಿಪಿಗಳಾದ ಡಾ.ಹರ್ಷ ಪ್ರಿಯಂವದಾ, ಕೆ.ಎಸ್.ಸುಂದರರಾಜ್, ನಗರಪಾಲಿಕೆ ಆಯುಕ್ತರಾದ ಎಂ.ಕೆ.ಸವಿತಾ, ಎಂಡಿಎ ಆಯುಕ್ತ ಬಿ.ಆರ್.ಮಹೇಶ್, ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಎಂ.ಎಸ್.ಅರ್ಚನಾ, ಅಧಿಕ್ಷಕ ಅಭಿಯಂತರ ಸುನಿಲ್ ಕುಮಾರ್, ಪಾಲಿಕೆ ಹೆಚ್ಚುವರಿ ಆಯುಕ್ತರಾದ ಜಿ.ಎಸ್.ಸೋಮಶೇಖರ್, ಬಿ.ಎನ್.ವೀಣಾ, ದಾಸೇಗೌಡ, ಅಧಿಕ್ಷಕ ಅಭಿಯಂತರರಾದ ಕೆ.ಜೆ.ಸಿಂಧು, ಡಿಸಿಎಫ್‌ಗಳಾದ ಡಾ.ಐ.ಬಿ.ಪ್ರಭುಗೌಡ, ಸಿ.ಪರಮೇಶ್, ಉಪ ವಿಭಾಗಾಧಿಕಾರಿ ಆಶಪ್ಪ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಪದ್ಮನಾಭ, ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಸಿಎಆರ್‌ಡಿಸಿಪಿ ಸಿದ್ದನಗೌಡ ಪಾಟೀಲ್ ಮತ್ತಿತರರು ಹಾಜರಿದ್ದರು.
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…