ಮೈಸೂರು: ಎಸೆನ್ಸ್ ಸೇವನೆಯಿಂದಲೇ ಮೂವರು ಕೈದಿಗಳು ಸಾವು ಎಂದು ಸ್ಪಷ್ಟಪಡಿಸಲು ಸಾಧ್ಯವಿಲ್ಲ ಎಂದು ಕೆ.ಆರ್.ಆಸ್ಪತ್ರೆಯ ವೈದ್ಯ ದಿನೇಶ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಮೂವರು ಕೈದಿಗಳು ಜೈಲಿನಲ್ಲಿ ಬೇಕರಿ ಪದಾರ್ಥಗಳನ್ನು ತಯಾರು ಮಾಡುತ್ತಿದ್ದರು. ವಾಂತಿ ಭೇದಿ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಮೂವರು ಕೂಡ ಆಸ್ಪತ್ರೆಗೆ ನಡೆದುಕೊಂಡೇ ಬಂದರು. ಆರಂಭದಲ್ಲಿ ಎಸೆನ್ಸ್ ಸೇವನೆ ಬಗ್ಗೆ ಮಾಹಿತಿ ನೀಡಲಿಲ್ಲ. ಒಂದೇ ದಿನದಲ್ಲಿ ಅಂಗಾಂಗ ವೈಫಲ್ಯ ಆಗಲು ಶುರುವಾಯಿತು. ನಂತರದಲ್ಲಿ ಎಸೆನ್ಸ್ ಸೇವನೆ ಬಗ್ಗೆ ಮಾಹಿತಿ ನೀಡಿದರು. ಎಷ್ಟು ಪ್ರಮಾಣದಲ್ಲಿ ಸೇವನೆ ಮಾಡಿದ್ದಾರೆ ಎಂಬುದನ್ನು ತಿಳಿಯಲು ಸಾಧ್ಯವಾಗಲಿಲ್ಲ. ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದರು.
ಇನ್ನು ಮೂವರು ಮಾದಕ ವಸ್ತುಗಳ ಸೇವನೆ ಮಾಡಿದ್ದಾರಾ ಎಂಬ ಬಗ್ಗೆ ಪರೀಕ್ಷೆ ಮಾಡಲಾಗಿದೆ. ವರದಿ ಬಂದ ನಂತರವಷ್ಟೇ ಮೂವರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಮಾಹಿತಿ ನೀಡಿದರು.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…