ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಮೈಸೂರು ನಗರ ಹಾಗೂ ಗ್ರಾಮಾಂತರ ಬಿಜೆಪಿ ಘಟಕದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಗುರುವಾರ ನಗರದ ನೂತನ ಜಿಲ್ಲಾಧಿಕಾರಿಗಳಿ ಬಳಿ ಬಂದ ನೂರಾರು ಬಿಜೆಪಿ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ನಗರ ಅಧ್ಯಕ್ಷ ಎಲ್ ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಎಲ್ ಆರ್ ಮಹದೇವಸ್ವಾಮಿ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.