ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಸಮೀಪ ಗಲಾಟೆಗೆ ಕಾರಣನಾಗಿದ್ದ ಆರೋಪಿ ಸತೀಶ್ ಅಲಿಯಾಸ್ ಪಾಂಡುರಂಗಗೆ ಒಂದು ದಿನ ಪೊಲೀಸ್ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಇಂದು (ಫೆ.14) ಪೊಲೀಸರು ಆರೋಪಿ ಸತೀಶನನ್ನು ಮೈಸೂರಿನ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.
ಸರ್ಕಾರಿ ವಕೀಲೆ (ಎಪಿಪಿ) ಸವಿತಾ ಅವರು, ಆರೋಪಿಯನ್ನು ಐದು ದಿನ ಪೊಲೀಸ್ ಕಸ್ಟಡಿಗೆ ನೀಡಲು ಮನವಿ ಮಾಡಿದರು. ಇದಕ್ಕೆ ತೀವ್ರ ಆಕ್ರರೋಶ ವ್ಯಕ್ತಪಡಿಸಿದ ಆರೋಪಿ ಪರ ವಕೀಲ ಅ.ಮ.ಭಾಸ್ಕರ್ ಕೇವಲ ಮೂರು ಗಂಟೆ ಪೊಲೀಸ್ ಕಸ್ಟಡಿಗೆ ನೀಡುವಂತೆ ವಾದಿಸಿದರು.
ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿ, ಘಟನೆಗೆ ಸಂಬಧಿಸಿದಂತೆ ತನಿಖೆ ನಡೆಸಿ ಎಂದು ನ್ಯಾಯಾಧೀಶರಾದ ಸರೋಜ ಅವರು ಆದೇಶ ಹೊರಡಿಸಿದರು.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…