ಮೈಸೂರು: ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಆರೋಪಿ ಪರ ಜಾಮೀನಿಗಾಗಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಕೇಜ್ರಿವಾಲ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಸಂಬಂಧ, ಗಲಭೆಗೆ ಕಾರಣನಾಗಿದ್ದ ಪಾಂಡುರಂಗ ಅಲಿಯಾಸ್ ಸತೀಶ ಎಂಬಾತನನ್ನು ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆ 299ರ ಅಡಿ ಪೊಲೀಸರು ಬಂಧಿಸಿ. ಅದೇ ದಿನ ರಾತ್ರಿ 2.30ಕ್ಕೆ ನ್ಯಾಯಾಧೀಶರ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಆರೋಪಿ ಪರ ವಕೀಲರಾದ ಅ.ಮ.ಭಾಸ್ಕರ್ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಆದರೆ, ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿದರು.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಆರೋಪಿ ಪರ ವಕೀಲರು, ಮೊಬೈಲ್ ವಶಕ್ಕೆ ಪಡೆಯದೇ, ಹೇಗೆ ಆತನೇ ಪ್ರಚೋದನಕಾರಿ ಪೋಸ್ಟ್ ಹಾಕಿದ್ದಾನೆಂದು ಬಂದಿಸಿದ್ದೀರಾ? ಇದು ಕಾನೂನು ಬಾಹಿರ ಎಂದು ವಾದಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆರೋಪಿ ಸತೀಶ್‌ನನ್ನು ನಾಳೆ ಕೋರ್ಟ್‌ಗೆ ಹಾಜರು ಪಡಿಸುವಂತೆ ಆದೇಶಿಸಿ ವಿಚಾರಣೆ ಮುಂದೂಡಿದರು.





