ಮೈಸೂರು ನಗರ

ಅವಹೇಳನಕಾರಿ ಪೋಸ್ಟ್‌: ಜಾಮೀನು ಮೊರೆ ಹೋದ ಆರೋಪಿ

ಮೈಸೂರು: ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್‌ ಹಾಕಿದ್ದ ಆರೋಪಿ ಪರ ಜಾಮೀನಿಗಾಗಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ರಾಹುಲ್‌ ಗಾಂಧಿ, ಅಖಿಲೇಶ್‌ ಯಾದವ್‌, ಕೇಜ್ರಿವಾಲ್‌ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಸಂಬಂಧ, ಗಲಭೆಗೆ ಕಾರಣನಾಗಿದ್ದ ಪಾಂಡುರಂಗ ಅಲಿಯಾಸ್‌ ಸತೀಶ ಎಂಬಾತನನ್ನು ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆ 299ರ ಅಡಿ ಪೊಲೀಸರು ಬಂಧಿಸಿ. ಅದೇ ದಿನ ರಾತ್ರಿ 2.30ಕ್ಕೆ ನ್ಯಾಯಾಧೀಶರ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಆರೋಪಿ ಪರ ವಕೀಲರಾದ ಅ.ಮ.ಭಾಸ್ಕರ್‌ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಆದರೆ, ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್‌ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಆರೋಪಿ ಪರ ವಕೀಲರು, ಮೊಬೈಲ್‌ ವಶಕ್ಕೆ ಪಡೆಯದೇ, ಹೇಗೆ ಆತನೇ ಪ್ರಚೋದನಕಾರಿ ಪೋಸ್ಟ್‌ ಹಾಕಿದ್ದಾನೆಂದು ಬಂದಿಸಿದ್ದೀರಾ? ಇದು ಕಾನೂನು ಬಾಹಿರ ಎಂದು ವಾದಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಆರೋಪಿ ಸತೀಶ್‌ನನ್ನು ನಾಳೆ ಕೋರ್ಟ್‌ಗೆ ಹಾಜರು ಪಡಿಸುವಂತೆ ಆದೇಶಿಸಿ ವಿಚಾರಣೆ ಮುಂದೂಡಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

3 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

7 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

7 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

7 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

7 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

7 hours ago