ಮೈಸೂರು: ಅವಹೇಳನಕಾರಿ ಪೋಸ್ಟ್ ಸಂಬಂಧ ಆರೋಪಿ ವಿರುದ್ಧ ದೂರು ದಾಖಲಿಸಲು ವಿಳಂಬ ಮಾಡಿದ್ದೇ ಉದ್ವಿಗ್ನ ಪರಿಸ್ಥಿತಿ ಉಂಟಾಗಲು ಕಾರಣ ಎಂದು ಎಸ್‌ಡಿಪಿಐ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ.
ಇಂದು (ಫೆ.13) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದಿನಿಂದಲೂ ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಆರ್‌ಎಸ್‌ಎಸ್ ಕಾರ್ಯಕರ್ತರು ಮಾಡುತ್ತಾ ಬಂದಿದ್ದಾರೆ. ಈ ಘಟನೆಯೂ ಅದಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.
ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ಮೇಲೆ ಸಂಜೆ ಅದರೂ ಏಫ್‌ಐಆರ್ ಹಾಕದೇ ವಿಳಂಬ ಮಾಡಿದ್ದೇ ಗಲಭೆಗೆ ಕಾರಣವಾಯಿತು. ಶಾಂತಿ ಕಾಪಾಡುವ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಸಿದ್ದೇವೆ. ಪೊಲೀಸರು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದರು.
ಪ್ರತಾಪ ಸಿಂಹನ ಹೇಳಿಕೆಗೆ ಪ್ರತಿಕ್ರಿಯಿಸಿ, ಇನ್ನೊಬ್ಬರಿಗೆ ಬುದ್ಧಿ ಹೇಳುವ ನೈತಿಕತೆ ಇವರಿಗಿಲ್ಲ. ಈ ಘಟನೆಗೆ ಮೂಲ ಕಾರಣ ನಿಮ್ಮ ಕಾರ್ಯಕರ್ತನೆ ಎಂಬ ಮಾಹಿತಿ ಇದೆ. ಇದರ ಬಗ್ಗೆ ತನಿಖೆ ನಡೆಯಬೇಕಿದೆ. ತಪ್ಪಿತಸ್ಥರಿಗೆ ಕಾನೂನು ಕ್ರಮ ಆಗಲಿ. ಆದರರೆ ಒಬ್ಬನೇ ಅಮಾಯಕರರಿಗೆ ಅನ್ಯಾಯ ಆಗಬಾರದು ಎಂದು ತಿಳಿಸಿದರು.





