mysure parking problem
ಮೈಸೂರು : ಬಸ್ ಹಾಗೂ ಕಾರಿನ ಓಡಾಟ ಹೆಚ್ಚಾಗಿರುವ ಕಾರಣ ತಾತ್ಕಾಲಿಕವಾಗಿ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಸ್ಥಳ ಬದಲಿಸಿ ಎಂದು ಸ್ಥಳೀಯರು ಕೆ.ಆರ್.ಸಂಚಾರ ಠಾಣೆಗೆ ಮನವಿ ಸಲ್ಲಿಸಿದ್ದಾರೆ.
ಅಗ್ರಹಾರದಲ್ಲಿ ಯುಜಿಡಿ ಸಮಸ್ಯೆಯಿಂದ ಅಲ್ಲಿನ ರಸ್ತೆ ಬಂದ್ ಆಗಿರುವುದರಿಂದ ಪಾರ್ಕಿಂಗ್‌ನಲ್ಲಿ ದ್ವಿಚಕ್ರ ವಾಹನಗಳು ಎರಡು ಭಾಗದಲ್ಲಿ ನಿಲ್ಲುವುದರಿಂದ ಬಸ್ ಹಾಗೂ ಕಾರ್‌ಗಳ ಓಡಾಟಕ್ಕೆ ಕಿರಿಕಿರಿ ಎದುರಾಗಿದೆ.
ಅಗ್ರಹಾರದಲ್ಲಿನ ಯುಜಿಡಿ ಕಾಮಗಾರಿ ಮುಗಿದ ಮೇಲೆ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಅವಕಾಶ ನೀಡಿ, ಅಲ್ಲಿಯವರೆಗೆ ತಾತ್ಕಾಲಿಕವಾಗಿ ಸ್ಥಳ ಬದಲಿಸಿ ನೋ ಪಾರ್ಕಿಂಗ್ ನಾಮಫಲಕ ಹಾಕಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಪಾರ್ಕಿಂಗ್ ಸ್ಥಳದಲ್ಲಿ ಬೈಕ್, ಕಾರ್ ನಿಲ್ಲಿಸುತ್ತಾರೆ. ಇಲ್ಲಿ ನಿತ್ಯ ನೂರಾರು ಬೈಕ್‌ಗಳು ನಿಲ್ಲಿಸುತ್ತಾರೆ. ನಿತ್ಯ ನೂರಾರು ಬೈಕ್‌ಗಳು ನಿಂತಿರುತ್ತವೆ. ಇಂಥ ವಾಹನಗಳ ಪಾರ್ಕಿಂಗ್‌ನಿಂದ ಅಪಘಾತಕ್ಕೆ ಕಾರಣವಾಗಬಹುದು. ಕೆ.ಆರ್.ಸಂಚಾರ ಠಾಣೆ ವ್ಯಾಪ್ತಿಗೆ ಬರುವುದರಿಂದ ಮುನ್ನಚ್ಚರಿಕೆ ಕೈಗೊಳ್ಳಬೇಕು ಎಂದು ಸುಣ್ಣದಕೇರಿಯ ನಿವಾಸಿಗಳು ಮನವಿ ಮಾಡಿದ್ದಾರೆ.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…