ಮೈಸೂರು: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅಭಿನಯದ ಥಗ್‌ಲೈಫ್ ಸಿನಿಮಾ ಬಹಿಷ್ಕಾರ ಮಾಡುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರರು ಮೈಸೂರಿನಲ್ಲಿಂದು ಪ್ರತಿಭಟನೆ ನಡೆಸಿದರು.
ನಗರದ ಅಗ್ರಹಾರದಲ್ಲಿ ಜಮಾಯಿಸಿದ ಕನ್ನಡಪರ ಹೋರಾಟಗಾರರು, ನಟ ಕಮಲ್ ಹಾಸನ್ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕನ್ನಡಿಗರೇ ಕಮಲ್ ಹಾಸನ್ ಚಿತ್ರ ಬಹಿಷ್ಕರಿಸಿ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ಸ್ವಾಭಿಮಾನಿ ಕನ್ನಡಿಗರೇ ಥಗ್ ಲೈಫ್ ಚಿತ್ರ ನೋಡಬೇಡಿ ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸೋಣ. ಆದರೆ ಕನ್ನಡ ಭಾಷೆಗೆ ಅವಮಾನ ಮಾಡಿರುವ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಚಿತ್ರ ನೋಡಲ್ಲ. ಕಮಲ್ ಹಾಸನ್ ಕನ್ನಡಿಗರ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.