ಮೈಸೂರು: ಗೌರಿ ಗಣೇಶ ಹಬ್ಬಕ್ಕೆ ಇನ್ನು ಆರು ದಿನಗಳು ಬಾಕಿಯಿದ್ದು, ಪರಿಸರ ಸ್ನೇಹಿ ಗಣಪನ ಮೂರ್ತಿಗಳ ತಯಾರಿ ಭರದಿಂದ ಸಾಗಿದೆ.
ಯುವಕರು ಅಂದ ಚೆಂದದಿಂದ ಕಂಗೊಳಿಸುವ ಗೌರಿ ಸುತನನ್ನು ಪ್ರತಿಷ್ಠಾಪಿಸಲು ಮುಂಗಡ ಕಾಯ್ದಿರಿಸುವತ್ತ ಚಿತ್ತ ಹರಿಸುತ್ತಿದ್ದು, ಈ ಬಾರಿ ಪರಿಸರ ಸ್ನೇಹಿ ಗಣಪನಿಗೆ ಭಾರೀ ಬೇಡಿಕೆ ಹೆಚ್ಚಾಗಿದೆ.
ಮಾರುಕಟ್ಟೆಯಲ್ಲಂತೂ ಮಣ್ಣಿನ ಗಣೇಶ ಮೂರ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಯುವಕರು ಹಬ್ಬದ ದಿನದಂದು ಮಣ್ಣಿನ ಗಣಪನನ್ನೇ ಕೂರಿಸಲು ಕಾತುರರಾಗಿದ್ದಾರೆ.
ಈ ಬಾರಿ ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮಾರಾಟಕ್ಕೆ ಮಾತ್ರ ಜಿಲ್ಲಾಡಳಿತ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಗಾತ್ರದ ಮಣ್ಣಿನ ಗಣಪನನ್ನು ಕೂಡ ತಯಾರು ಮಾಡಲಾಗಿದೆ.
ಇನ್ನು ಜಲಮೂಲಗಳ ರಕ್ಷಣೆ ಹಾಗೂ ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ ನಿಸರ್ಗ ಸ್ನೇಹಿ ಹಾಗೂ ಮಣ್ಣಿನ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡಲು ಜಿಲ್ಲಾಡಳಿತ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯವಾಗಿ ಯುವಕರು ಪಿಒಪಿ ಗಣಪನನ್ನು ಕೂರಿಸುವ ಯೋಜನೆ ಕೈಬಿಟ್ಟಿದ್ದು, ಪರಿಸರ ಸ್ನೇಹಿ ಗಣಪನನ್ನೇ ಕೂರಿಸಿ ಅದ್ಧೂರಿಯಾಗಿ ಹಬ್ಬ ಮಾಡಲು ಕಾತುರರಾಗಿದ್ದಾರೆ.
ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ ಮಡಿಕೇರಿ: ಡಿ.೨೦…
ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…