ಮೈಸೂರು ನಗರ

ಜಾತಿ ಜನಗಣತಿ ವರದಿ ಜಾರಿಗೆ ಶೋಷಿತ ಸಮುದಾಯಗಳ ಒಕ್ಕೂಟ ಆಗ್ರಹ

ಮೈಸೂರು: ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಗೊಳಿಸಲು ಒತ್ತಾಯಿಸಿ ಬುಧವಾರ ಶೋಷಿತ ಸಮುದಾಯಗಳ ಒಕ್ಕೂಟದಿಂದ ಮೈಸೂರು ಅಪರ ಜಿಲ್ಲಾಧಿಕಾರಿಗಳಾದ ಪಿ.ಶಿವರಾಜು ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಅಪ್ಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿದ ಬಿ. ಸುಬ್ರಹ್ಮಣ್ಯ, ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮೀನಾಮೇಶ ಎಣಿಸುವ ಅಗತ್ಯವಿಲ್ಲ. ಸುಮಾರು 170 ಕೋಟಿ ರೂ ಗಳನ್ನು ಖರ್ಚು ಮಾಡಿ ತಯಾರಿಸಿರುವ ಈ ವರದಿಯು ತಕ್ಷಣ ಫಲಪ್ರದ ಆಗಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಜನಸಂಖ್ಯೆಯ ಮುಕ್ಕಾಲು ಭಾಗಕ್ಕೂ ಜಾಸ್ತಿ ಇರುವ ಅಹಿಂದ ವರ್ಗಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಉದ್ಯೋಗದ ಅವಕಾಶಗಳು ಮತ್ತು ವಿದ್ಯಾಭ್ಯಾಸದ ಅವಕಾಶಗಳು ಲಭಿಸಿಲ್ಲ. ಅಹಿಂದ ವರ್ಗಗಗಳಲ್ಲಿ ಅರಿವು ಮತ್ತು ಸಂಘಟನೆಯ ಕೊರತೆಯ ಕಾರಣಕ್ಕಾಗಿ ಅವಕಾಶಗಳು ಸಿಕ್ಕಿಲ್ಲ ಎನ್ನುವುದರ ಜೊತೆಗೆ ನಿರ್ಧಿಷ್ಟವಾಗಿ ಅವರ ಜನಸಂಖ್ಯಾ ಪರಿಸ್ಥಿತಿ ಗೊತ್ತಿಲ್ಲದಿರುವುದು ಪ್ರಮುಖ ಕಾರಣವಾಗಿದೆ.

ಜಾತಿ ಜನಗಣತಿಯ ವರದಿ ಬಂದರೆ ಜಾತಿಗಳ ವಸ್ತುಸ್ಥಿತಿ ತಿಳಿಯಲಿದೆ. ಅದಕ್ಕೆ ಪೂರಕವಾಗಿ ಸರ್ಕಾರಗಳು ಕಾರ್ಯಕ್ರಮಗಳನ್ನು ರೂಪಿಸಬಹುದಾಗಿದೆ. ಈಗ ರಾಜ್ಯದ ಸುಮಾರು ಆರೂವರೆ ಕೋಟಿ ಜನಸಂಖ್ಯೆಯ ಅಧ್ಯಯನವಾಗಿರುವುದರಿಂದ ಜಾತಿ ಜನಗಣತಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಎಲ್ಲಾ ಜಾತಿಗಳಿಗೂ ಒಂದಲ್ಲ ಒಂದು ರೀತಿಯಲ್ಲಿ ಅನುಕೂಲ ಆಗಲಿದೆ. ಹಾಗಾಗಿ ಎಲ್ಲಾ ಜಾತಿಗಳು ಕೂಡ ಜಾತಿ ಜನಗಣತಿ ವರದಿ ಬಿಡುಗಡೆಗೆ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಮನವಿ ಮಾಡಿದರು.

 

ಆಂದೋಲನ ಡೆಸ್ಕ್

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

5 seconds ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

11 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

29 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

52 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago