ಮೈಸೂರು: ವಿಪಕ್ಷ ನಾಯಕ ಸ್ಥಾನಕ್ಕೆ ಆರ್.ಅಶೋಕ್ ರಾಜೀನಾಮೆ ನೀಡಲಿ ಎಂದು ಸಚಿವ ಕೃಷ್ಣಭೈರೇಗೌಡ ಆಗ್ರಹಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪದೇ ಪದೇ ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ ಅವರು, ಮೊದಲು ಆರ್.ಅಶೋಕ್ ರಾಜೀನಾಮೆ ಕೊಟ್ಟು ಮಾತನಾಡಲಿ. ಬಿಡಿಎ ಜಮೀನನ್ನು ಡಿನೋಟಿಫಿಕೇಷನ್ ಮಾಡಿಸುತ್ತಾರೆ. ಬೇರೆಯವರ ಹೆಸರಿನಲ್ಲಿ ಅಶೋಕ್ ಭೂಮಿ ಖರೀದಿಸಿದ್ದಾರೆ. ಡಿನೋಟಿಫಿಕೇಷನ್‌ಗೂ ಮೊದಲೇ ಖರೀದಿ ಮಾಡಿದ್ದಾರೆ. ಹೀಗಾಗಿ ಆರ್.ಅಶೋಕ್ ಮಾಡಿರೋದು ಬಹಳ ನ್ಯಾಯನಾ ಎಂದು ಪ್ರಶ್ನೆ ಮಾಡಿದರು.
ಮೊದಲು ಸಿಎಂ ರಾಜೀನಾಮೆ ಕೇಳುವುದಕ್ಕಿಂತಲೂ ಮುಂಚೆ ಆರ್.ಅಶೋಕ್ ಅವರು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಬಳಿಕ ಸಿಎಂ ಹಾಗೂ ಮುಡಾ ಹಗರಣದ ಬಗ್ಗೆ ಮಾತನಾಡಲಿ ಎಂದು ಆಗ್ರಹಿಸಿದರು.