ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಎಚ್.ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ನೀವು ಸುಪ್ರೀಂಕೋರ್ಟ್‌ಗೆ ಹೋದ್ರು ನಿಮ್ಮ ಪರ ತೀರ್ಪು ಬರಲ್ಲ. ಹಾಗಾಗಿ ರಾಜೀನಾಮೆ ಕೊಡಿ ಎಂದು ಆಗ್ರಹಿಸಿದರು.
ಸಿಎಂ ಸಿದ್ದರಾಮಯ್ಯನವರೇ ನೀವು ರಾಜೀನಾಮೆ ಕೊಡಲೇಬೇಕು. ನಾನು ಈ ಹಿಂದೆ ಮಾಡಿದ್ದ ಪ್ರೆಸ್‌ಮೀಟ್‌ನಲ್ಲಿ 14 ಸೈಟ್‌ಗಳನ್ನು ವಾಪಸ್ ಕೊಡಿ ತನಿಖೆ ಮಾಡಿಸಿ ಎಂದು ಸಿದ್ದರಾಮಯ್ಯಗೆ ಮನವಿ ಮಾಡಿದ್ದೆ. ಆದರೆ ಇದೆಲ್ಲಾ ಆಗಲಿಲ್ಲ. ಈಗ ಹೈಕೋರ್ಟ್ ತೀರ್ಪು ಬಂದಿದೆ. ನೀವು ಸುಪ್ರೀಂಕೋರ್ಟ್‌ಗೆ ಹೋದರೂ ನಿಮ್ಮ ಪರ ತೀರ್ಪು ಬರಲ್ಲ ಎಂದು ಕಿಡಿಕಾರಿದರು.
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…